ಮಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಕೇರಳ ಮೂಲದ ಗೌತಮ್ ಎಂಬಾತನನ್ನು ಆರೋಪಿಯನ್ನು ಪಾಂಡೇಶ್ವರ ಮಹಿಳಾ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದು, ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಇದೀಗ ಆರೋಪಿ ಗೌತಮ್ ವಿರುದ್ಧ ಪೊಕ್ಸೊ ಪ್ರಕರಣ ದಾಖಲಾಗಿದೆ. ಆರೋಪಿಯು 17 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆಂದು ಆಕೆಯ ತಾಯಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅಲ್ಲದೆ ಆಕೆಯನ್ನು ವಿವಾಹ ಮಾಡಿಕೊಡುವಂತೆ ಮನೆಯವರಲ್ಲಿ ಒತ್ತಾಯ ಮಾಡುತ್ತಿದ್ದ. ಅಲ್ಲದೆ, ಬಳಿಕ ಫೋನ್ ಕರೆ ಮಾಡಿ ವಿವಾಹ ಮಾಡಿಕೊಡಿ ಎಂದು ಬೆದರಿಕೆ ಒಡ್ಡಿದ್ದ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಇದೀಗ ಪ್ರಕರಣವನ್ನು ಉಳ್ಳಾಲ ಠಾಣೆಯಿಂದ ಮಹಿಳಾ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಪೊಕ್ಸೊ ಪ್ರಕರಣ ದಾಖಲಿಸಿರುವ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸಿದ್ದರು. ಬಳಿಕ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಿದೆ.
ಇದನ್ನೂ ಓದಿ: ಅನೈತಿಕ ಸಂಬಂಧ: ಗ್ರಾಮ ಪಂಚಾಯ್ತಿ ಸದಸ್ಯ ಸೇರಿದಂತೆ ಪತ್ನಿ ಕೊಲೆ ಮಾಡಿದ ಗಂಡ