ETV Bharat / state

ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 12 ವರ್ಷ ಜೈಲು ಶಿಕ್ಷೆ, ಸಂತ್ರಸ್ತೆಗೆ 3 ಲಕ್ಷ ರೂ. ಪರಿಹಾರ

ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿಸಿ ಮಗುವಾದ ಬಳಿಕ ಪರಾರಿಯಾಗಿದ್ದ ಯುವಕನ ಮೇಲಿನ ಆರೋಪ ಸಾಬೀತುಗೊಂಡಿದ್ದು, ಅಪರಾಧಿಗೆ 12 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಕೋರ್ಟ್​ ತೀರ್ಪು ನೀಡಿದೆ.

young-man-sentenced-to-12-years-in-prison-for-minor-rape-case
ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 12 ವರ್ಷ ಜೈಲು ಶಿಕ್ಷೆ, ಸಂತ್ರಸ್ತೆಗೆ 3 ಲಕ್ಷ ರೂ. ಪರಿಹಾರ
author img

By

Published : Oct 14, 2021, 2:49 AM IST

ಮಂಗಳೂರು: ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿಸಿ ಮಗುವಾದ ಬಳಿಕ ಪರಾರಿಯಾಗಿದ್ದಾನೆಂಬ ಯುವಕನ ಮೇಲಿನ ಆರೋಪ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಎಫ್‌ಟಿಎಸ್‌ಸಿ-1 (ಪೋಕ್ಸೋ) ನ್ಯಾಯಾಲಯದಲ್ಲಿ ಸಾಬೀತುಗೊಂಡಿದ್ದು, ಅಪರಾಧಿಗೆ 12 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಲಾಗಿದೆ.

ಗದಗ ಜಿಲ್ಲೆಯ ಮೂಲದವನಾಗಿದ್ದ, ಸದ್ಯ ನಗರದ ಕಾವೂರಿನಲ್ಲಿ ವಾಸವಾಗಿದ್ದ ಕೂಲಿ ಕಾರ್ಮಿಕ ಮಲ್ಲಿಕಾರ್ಜುನ ಹನುಮಂತಪ್ಪ (27) ಶಿಕ್ಷೆಗೊಳಗಾದ ಅಪರಾಧಿ. ಮಲ್ಲಿಕಾರ್ಜುನ ಹಾಗೂ ಸಂತ್ರಸ್ತ ಬಾಲಕಿಯ ತಂದೆ ಸ್ನೇಹಿತರಾಗಿದ್ದು, ಜೊತೆಯಲ್ಲಿಯೇ ಕೂಲಿ ಕೆಲಸಕ್ಕೆ ಹೋಗುತ್ತಿದ್ದರು. ಅಪರಾಧಿ ಹಾಗೂ ಸಂತ್ರಸ್ತೆಯ ಮನೆಯೂ ಅಕ್ಕಪಕ್ಕದಲ್ಲಿತ್ತು. ಬಾಲಕಿಯೊಂದಿಗೆ ಸಲಿಗೆ ಬೆಳೆಸಿಕೊಂಡಿದ್ದ ಮಲ್ಲಿಕಾರ್ಜುನ 16 ವರ್ಷದ ಸಂತ್ರಸ್ತೆಯನ್ನು ಮದುವೆಯಾಗುವುದಾಗಿ ನಂಬಿಸಿ 2017ರ ಮೇ ತಿಂಗಳಿನಲ್ಲಿ ಅಪಹರಿಸಿದ್ದ. ಬಾಲಕಿ ನಾಪತ್ತೆಯಾದ ಬಗ್ಗೆ ಹೆತ್ತವರು ಕಾವೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಗೋವಾದಲ್ಲಿ ಅತ್ಯಾಚಾರ:

ಆರೋಪಿ‌ ಮಲ್ಲಿಕಾರ್ಜುನ ಸಂತ್ರಸ್ತ ಬಾಲಕಿಯನ್ನು ಗೋವಾಕ್ಕೆ ಕರೆದೊಯ್ದು, ಅಲ್ಲಿ ಆಕೆಯ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ್ದ. ಪರಿಣಾಮವಾಗಿ ಆಕೆ ಗರ್ಭಿಣಿಯಾಗಿದ್ದಳು. ಬಳಿಕ ಗೋವಾದ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಳು. ಆದರೆ ಈ ಸಂದರ್ಭ ಆರೋಪಿಯು ಬಾಲಕಿ ಹಾಗೂ ಮಗುವನ್ನು ಬಿಟ್ಟು ಪರಾರಿಯಾಗಿದ್ದಾನೆ. ಜೊತೆಗೆ ಹೆತ್ತವರಿಗೆ ಈ ವಿಚಾರ ತಿಳಿಸದಂತೆ ಜೀವ ಬೆದರಿಕೆಯನ್ನೂ ಹಾಕಿದ್ದ. ವಿಚಾರ ತಿಳಿದ ಬಾಲಕಿಯ ಹೆತ್ತವರು ಬಾಲಕಿಯನ್ನು ಆಕೆಯ ಮನೆಗೆ ಕರೆದುಕೊಂಡು ಬಂದು ಕಾವೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಆರೋಪಿಯ ವಿರುದ್ಧ ಅಪಹರಣ, ಅತ್ಯಾಚಾರ, ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ(ಪೊಕ್ಸೊ) ಪ್ರಕರಣ ದಾಖಲಾಗಿತ್ತು. ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಈ ಬಗ್ಗೆ ಎಸಿಪಿಗಳಾದ ರಾಜೇಂದ್ರ, ಮಂಜುನಾಥ ಶೆಟ್ಟಿ ಮತ್ತು ಶ್ರೀನಿವಾಸ ಗೌಡ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶೆ ಸಾವಿತ್ರಿ ವಿ. ಭಟ್ ಆರೋಪಿಯ ವಿರುದ್ಧದ ಆರೋಪ ಸಾಬೀತಾಗಿದೆ ಎಂದು ತೀರ್ಪು ನೀಡಿದ್ದಾರೆ.

ಶಿಕ್ಷೆ ವಿಧಿಸಿದ ನ್ಯಾಯಾಲಯ:

ಈ ಹಿನ್ನೆಲೆಯಲ್ಲಿ ಅತ್ಯಾಚಾರ ಪ್ರಕರಣಕ್ಕೆ 6 ವರ್ಷ ಕಠಿಣ ಜೈಲುಶಿಕ್ಷೆ ಹಾಗೂ 25 ಸಾವಿರ ರೂ. ದಂಡ, ಒಂದು ವೇಳೆ ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 4 ತಿಂಗಳು ಸಜೆ, ಅಪಹರಣ ನಡೆಸಿರುವುದಕ್ಕೆ 6 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 25 ಸಾವಿರ ರೂ. ದಂಡ, ದಂಡ ತೆರಲು ತಪ್ಪಿದರೆ 2 ತಿಂಗಳು ಹೆಚ್ಚುವರಿ ಸಜೆ, ಮದುವೆಯಾಗುವುದಾಗಿ ಹೇಳಿ ವಂಚಿಸಿರುವುದಕ್ಕೆ 6 ತಿಂಗಳು ಕಠಿಣ ಸಜೆ ಮತ್ತು 5,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 15 ದಿನಗಳ ಸಜೆ ಹಾಗ ಪೊಕ್ಸೊ ಕಾಯ್ದೆಯಡಿ 12 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಪ್ರಕರಣದಲ್ಲಿ 25 ಸಾಕ್ಷಿಗಳನ್ನು ವಿಚಾರಿಸಲಾಗಿದೆ. ದಂಡದ ಮೊತ್ತದಲ್ಲಿ ಸಂತ್ರಸ್ತೆಗೆ 50‌ ಸಾವಿರ ರೂ. ಪರಿಹಾರ ನೀಡಬೇಕು. ಅಲ್ಲದೆ, ಸರ್ಕಾರವು 2.50 ಲಕ್ಷ ರೂ. ಪರಿಹಾರ ನೀಡಬೇಕು ಎಂದು ನ್ಯಾಯಾಧೀಶರು ತಮ್ಮ ತೀರ್ಪಿನಲ್ಲಿ ತಿಳಿಸಿದ್ದಾರೆ. ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ (ಪೊಕ್ಸೋ) ವೆಂಕಟರಮಣ ಸ್ವಾಮಿ ಸಿ. ವಾದಿಸಿದ್ದರು.

ಇದನ್ನೂ ಓದಿ: ಕೇವಲ 1,000 ರೂಪಾಯಿಗೆ ಸ್ನೇಹಿತನ ಕೊಲೆ: ಮರ್ಡರ್ ಮಿಸ್ಟರಿ ಬಿಚ್ಚಿಟ್ಟ ಮರಣೋತ್ತರ ಪರೀಕ್ಷೆ ವರದಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.