ಮಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಬಂಧಿತನಾಗಿರುವ ನಟ, ಡ್ಯಾನ್ಸರ್ ಕಿಶೋರ್ ಶೆಟ್ಟಿ ಜೊತೆಗೆ ಸಂಪರ್ಕದಲ್ಲಿದ್ದು, ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಓರ್ವ ಯುವತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಕಿಶೋರ್ ಶೆಟ್ಟಿ ಜೊತೆಗೆ ಸಂಪರ್ಕದಲ್ಲಿದ್ದು ಮಾದಕ ದ್ರವ್ಯ ಸೇವನೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಇಬ್ಬರು ಯುವತಿಯರನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದರು. ಇಬ್ಬರ ರಕ್ತದ ಮಾದರಿಯನ್ನು ತಪಾಸಣೆಗೆ ಒಳಪಡಿಸಲಾಗಿದ್ದು, ಇದರಲ್ಲಿ ಡ್ರಗ್ಸ್ ಸೇವನೆ ಮಾಡಿರುವ ಕುರಿತು ಒಬ್ಬರ ವರದಿ ಪಾಸಿಟಿವ್ ಬಂದಿದ್ದರೆ, ಮತ್ತೊಬ್ಬರದು ನೆಗೆಟಿವ್ ಬಂದಿದೆ.
28 ವರ್ಷದ ಯುವತಿಯ ವರದಿ ಪಾಸಿಟಿವ್ ಬಂದಿದ್ದು, ಆಕೆ ಮಾದಕದ್ರವ್ಯ ಸೇವಿಸಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ.