ETV Bharat / state

ಲಾಡ್ಜ್​ಗಳಿಗೆ ಕರೆದೊಯ್ದು ಯುವತಿ ಮೇಲೆ ಅತ್ಯಾಚಾರ, ನಗ್ನಚಿತ್ರ ತೆಗೆದು ಬ್ಲ್ಯಾಕ್ ಮೇಲ್: ಆರೋಪಿ ಬಂಧನ - ಲಾಡ್ಜ್​ಗಳಿಗೆ ಕರೆದೊಯ್ದು ಯುವತಿ ಅತ್ಯಾಚಾರ ಪ್ರಕರಣ

ಯುವತಿಯೊಬ್ಬಳಿಗೆ ವಿವಾಹವಾಗುವ ಅಮಿಷವೊಡ್ಡಿ, ವಿವಿಧೆಡೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಲ್ಲದೇ ಆಕೆಯಿಂದ ಹಣ ಸುಲಿಗೆ ಮಾಡಿದ ಆರೋಪಿಯನ್ನು ಮಂಗಳೂರಿನಲ್ಲಿ ಬಂಧಿಸಲಾಗಿದೆ.

rape-case-accused-arrested-by-mangaluru-ccb-police
ಲಾಡ್ಜ್​ಗಳಿಗೆ ಕರೆದೊಯ್ದು ಯುವತಿ ಮೇಲೆ ಅತ್ಯಾಚಾರ
author img

By

Published : May 13, 2022, 9:04 PM IST

ಮಂಗಳೂರು: ಯುವತಿಯೊಬ್ಬಳಿಗೆ ವಿವಾಹವಾಗುವ ಅಮಿಷವೊಡ್ಡಿ, ಅತ್ಯಾಚಾರ ನಡೆಸಿ ಆಕೆಯಿಂದ ಹಣ ಸುಲಿಗೆ ಮಾಡಿದ ಪ್ರಕರಣದಲ್ಲಿ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಉಳ್ಳಾಲದ ಪೆರ್ಮನ್ನೂರು ಗ್ರಾಮದ ಶಾನ್ ನವಾಸ್ (36) ಎಂಬಾತನೆ ಬಂಧಿತ ಆರೋಪಿಯಾಗಿದ್ದಾನೆ.

ಈತ ಮೂಡಬಿದ್ರೆಯ ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿ ಹಣ ಸುಲಿಗೆ ಮಾಡಿದ್ದಾನೆ. ಮಾದಕ ವಸ್ತುಗಳನ್ನು ಬಲವಂತವಾಗಿ ಸೇವನೆ ಮಾಡಿಸಿ ಆಕೆಯ ನಗ್ನ ಚಿತ್ರಗಳನ್ನು ಮೊಬೈಲ್​ನಲ್ಲಿ ಸೆರೆಹಿಡಿದು, ಬಳಿಕ ಬ್ಲ್ಯಾಕ್​ಮೇಲ್ ಮಾಡಿ ಒಂದೂವರೆ ಲಕ್ಷ ರೂ. ಸುಲಿಗೆ ಮಾಡಿದ್ದ. ವಿವಿಧ ಕಡೆಗಳಲ್ಲಿನ ಲಾಡ್ಜ್​​ಗಳಿಗೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾನೆ ಎಂದು ಆರೋಪಿಸಿ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಯುವತಿ ದೂರು ನೀಡಿದ್ದಳು.

ಮಂಗಳೂರು ಮಹಿಳಾ ಪೊಲೀಸ್ ಠಾಣೆಯಿಂದ ಪ್ರಕರಣದ ಮುಂದಿನ ತನಿಖೆಯನ್ನು ಕೈಗೊಳ್ಳುವಂತೆ ಕಡತವನ್ನು ಸಿಸಿಬಿಗೆ ವರ್ಗಾಯಿಸಲಾಗಿತ್ತು. ಪ್ರಕರಣದ ತನಿಖೆ ಕೈಗೊಂಡ ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಯುವತಿಯನ್ನು ನಗರದ ಸೇರಿ ಪುಣೆ, ಮುಂಬೈನ ವಿವಿಧ ಲಾಡ್ಜ್​ಗಳಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದ ಎಂದು ದೂರಲಾಗಿದೆ.

ಆರೋಪಿಯು ಈ ಹಿಂದೆ 2019 ಹಾಗೂ 2020ರಲ್ಲಿ ಮಂಗಳೂರು ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಎರಡು ಮಾದಕ ವಸ್ತು ಮಾರಾಟದ ಪ್ರಕರಣದಲ್ಲಿ ಆರೋಪಿಯಾಗಿದ್ದಾನೆ. ಯುವತಿಯನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ಹಲವು ವರ್ಷಗಳಿಂದ ಪಾರ್ಕ್ ಮಾಡಲಾಗಿದ್ದ ಕಾರಿನಲ್ಲಿ‌ ಶವ ಪತ್ತೆ.. ಬೆಳಕಿಗೆ ಬಂದಿದ್ದು ಹೀಗೆ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.