ETV Bharat / state

ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು - Netravati bridge

ಉಳ್ಳಾಲದ ನೇತ್ರಾವತಿ ಸೇತುವೆಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

Road accident
Road accident
author img

By

Published : Aug 8, 2020, 10:48 AM IST

ಉಳ್ಳಾಲ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾ.ಹೆ.66ರ ನೇತ್ರಾವತಿ‌ ಸೇತುವೆಯಲ್ಲಿ ನಡೆದಿದೆ.

ಹರೇಕಳ ನಿವಾಸಿ ಹಮೀದ್ ಎಂಬುವವರ ಪುತ್ರ ಶಬೀರ್ (24) ಸಾವನ್ನಪ್ಪಿರುವ ಬೈಕ್ ಸವಾರ. ಈತ ಮಂಗಳೂರಿನಿಂದ ಹರೇಕಳದ ಮನೆಗೆ ಬೈಕ್ ನಲ್ಲಿ ತೆರಳುತ್ತಿದ್ದನು. ಈ ವೇಳೆ ಹಿಂಬದಿಯಿಂದ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಶಬ್ಬೀರ್​ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ನಾಗುರಿ ಸಂಚಾರಿ ಠಾಣಾ ಪೊಲೀಸರು ಡಿಕ್ಕಿ ಹೊಡೆದ ವಾಹನಕ್ಕಾಗಿ ಹುಡುಕಾಟ ಆರಂಭಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.