ETV Bharat / state

ಸೌದಿಯ ಜೈಲಿನಿಂದ ಕಡಬದ ಯುವಕ ಕೊನೆಗೂ ಬಂಧಮುಕ್ತ; ಇಂದು ತಾಯ್ನಾಡಿಗೆ ವಾಪಸ್: ಕುಟುಂಬದಲ್ಲಿ ಸಂಭ್ರಮ

Kadaba youth released from Saudi jail: ವಿದೇಶದಲ್ಲಿ ಸೆರೆವಾಸ ಅನುಭವಿಸುತ್ತಿದ್ದ ಕಡಬದ ಯುವಕ ಬಂಧಮುಕ್ತನಾಗಿದ್ದು ಇಂದು ಸ್ವದೇಶಕ್ಕೆ ಮರಳಲಿದ್ದಾರೆ.

Youth from Kadaba will return home
ವಿದೇಶದಿಂದ ಬಂಧನಮುಕ್ತವಾಗಿ ಸ್ವದೇಶಕ್ಕೆ ಬರಲಿರುವ ಕಡಬದ ಯುವಕ
author img

By ETV Bharat Karnataka Team

Published : Nov 20, 2023, 1:16 PM IST

Updated : Nov 21, 2023, 4:03 PM IST

ಕಡಬ: ಸೌದಿ ಅರೇಬಿಯಾದ ರಿಯಾದ್‌ನ ಜೈಲಿನಲ್ಲಿ ಬ್ಯಾಂಕ್‌ ಖಾತೆ ಹ್ಯಾಕರ್‌ಗಳ ಮೋಸದ ಜಾಲಕ್ಕೆ ಸಿಲುಕಿ ಕಳೆದ 11 ತಿಂಗಳಿನಿಂದ ಬಂಧಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್‌ ಕೊನೆಗೂ ಬಂಧನದಿಂದ ಮುಕ್ತರಾಗಿ ಇಂದು ಸ್ವದೇಶಕ್ಕೆ ಆಗಮಿಸಲಿದ್ದಾರೆ.

ರಿಯಾದ್‌ನಿಂದ ಅಲ್ಲಿನ ಪೊಲೀಸರು ಚಂದ್ರಶೇಖರ್​ ಅವರನ್ನು ಇಂದು ವಿಮಾನದಲ್ಲಿ ಮುಂಬೈಗೆ ಕಳುಹಿಸಿಕೊಡಲಿದ್ದು, ಅಲ್ಲಿಂದ ಅವರು ಬಹುತೇಕ ಸಂಜೆ ಸುಮಾರು ಏಳು ಗಂಟೆಯ ವೇಳೆಗೆ ಮಂಗಳೂರು ವಿಮಾನ ನಿಲ್ದಾಣ ತಲುಪಲಿದ್ದಾರೆ ಎಂದು ತಿಳಿದುಬಂದಿದೆ.

ಸೌದಿ ಅರೇಬಿಯಾಕ್ಕೆ ಚಂದ್ರಶೇಖರ್ 2022ರಲ್ಲಿ ತೆರಳಿದ್ದರು. ಅಲ್ಪಾನರ್‌ ಸೆರಾಮಿಕ್ಸ್‌ ಎಂಬ ಕಂಪೆನಿಯಲ್ಲಿ ಕೆಲಸದಲ್ಲಿದ್ದರು. 2022ರ ನವೆಂಬರ್‌ನಲ್ಲಿ ಮೊಬೈಲ್‌ ಮತ್ತು ಸಿಮ್‌ ಖರೀದಿಗೆ ರಿಯಾದ್‌ನ ಅಂಗಡಿಗೆ ಭೇಟಿ ನೀಡಿ, ಅಲ್ಲಿ ಅರ್ಜಿಯೊಂದಕ್ಕೆ ಎರಡು ಬಾರಿ ಸಹಿ ಮತ್ತು ಬೆರಳಚ್ಚು ಸಹಿ ನೀಡಿದ್ದರು. ನಂತರದಲ್ಲಿ ಒಂದು ವಾರಗಳ ನಂತರ ಅರೇಬಿಕ್‌ ಭಾಷೆಯಲ್ಲಿ ಅವರ ಹೊಸ ದೂರವಾಣಿ ಸಂಖ್ಯೆಗೆ ಸಂದೇಶವೊಂದು ಬಂದಿತ್ತು. ಚಂದ್ರಶೇಖರ್‌ ಅವರು ಅದನ್ನು ತೆರೆದು ನೋಡಿದ್ದರು. ನಂತರ ಎರಡು ದಿನಗಳ ಬಳಿಕ ದೂರವಾಣಿ ಕರೆ ಬಂದು ಹೊಸ ಸಿಮ್‌ ಕಾರ್ಡ್ ಬಗ್ಗೆ ಮಾಹಿತಿ ಕೇಳಲಾಗಿತ್ತು. ಈ ಸಮಯದಲ್ಲಿ ಬಂದ ಒಟಿಪಿಯನ್ನು ಕರೆ ಮಾಡಿದ ವ್ಯಕ್ತಿಗೆ ತಿಳಿಸಿದ್ದರು. ನಂತರದಲ್ಲಿ ಒಂದು ವಾರಗಳ ಬಳಿಕ ಅಲ್ಲಿನ ಪೊಲೀಸರು ಬಂದು ಚಂದ್ರಶೇಖರ್‌ ಅವರನ್ನು ಬಂಧಿಸಿದ್ದರು.

ಬಂಧನದ ಕಾರಣ ತಿಳಿದಾಗ ಚಂದ್ರಶೇಖರ್‌ಗೆ ಆಘಾತವಾಗಿತ್ತು. ಚಂದ್ರಶೇಖರ್‌ಗೆ ತಿಳಿಯದಂತೆ ಅಲ್ಲಿನ ಬ್ಯಾಂಕೊಂದರಲ್ಲಿ ಚಂದ್ರಶೇಖರ್ ಅವರ ಹೆಸರಿನಲ್ಲಿ ಹ್ಯಾಕರ್‌ಗಳು ಖಾತೆ ತೆರೆದು, ಈ ಖಾತೆಗೆ ಅಲ್ಲಿನ ಮಹಿಳೆಯೊಬ್ಬರ ಖಾತೆಯಿಂದ 22 ಸಾವಿರ ಸೌದಿ ರಿಯಾಲ್​ ಜಮೆ ಮಾಡಲಾಗಿತ್ತು. ಮಾತ್ರವಲ್ಲದೆ ಈ ಹಣವು ಸ್ವಲ್ಪ ಸಮಯದ ನಂತರ ಆ ಖಾತೆಯಿಂದ ಬೇರೆ ಯಾವುದೋ ದೇಶದ ಒಂದು ಬ್ಯಾಂಕ್ ಖಾತೆಗೂ ವರ್ಗಾವಣೆಯಾಗಿತ್ತು. ಈ ಕಾರಣದಿಂದ ಹಣ ಕಳೆದುಕೊಂಡ ಮಹಿಳೆಯು ಚಂದ್ರಶೇಖರ್‌ ಅವರ ಖಾತೆಗೆ ಹಣ ಜಮೆಯಾಗಿರುವುದನ್ನು ಗಮನಿಸಿ ಸೌದಿ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನ ಹಿನ್ನೆಲೆಯಲ್ಲಿ ವಂಚನೆ ಆರೋಪದಡಿ ಚಂದ್ರಶೇಖರ್‌ರನ್ನು ಪೊಲೀಸರು ಬಂಧಿಸಿದ್ದರು.

ಚಂದ್ರಶೇಖರ್‌ ಬಂಧನವಾದ ವಿಷಯವನ್ನು ಅವರ ಗೆಳೆಯರು ಕಡಬದಲ್ಲಿರುವ ಅವರ ಮನೆಯವರಿಗೆ ತಿಳಿಸಿದ್ದರು. ಜೈಲಿನಲ್ಲಿ ಇರುವ ವೇಳೆ ದಿನದಲ್ಲಿ ಕೇವಲ 2 ನಿಮಿಷ ಮಾತ್ರ ಚಂದ್ರಶೇಖರ್ ಅವರಿಗೆ ದೂರವಾಣಿ ಕರೆ ಮಾಡಲು ಅವಕಾಶ ನೀಡಲಾಗಿತ್ತು. ಮಾತ್ರವಲ್ಲದೆ ಅಲ್ಲಿನ ತನ್ನ ಸ್ಥಳೀಯ ಸ್ನೇಹಿತರಿಗೂ ಅವರನ್ನು ಭೇಟಿಯಾಗಲು ಅವಕಾಶವಿರಲಿಲ್ಲ.

ಚಂದ್ರಶೇಖರ್‌ ಸ್ನೇಹಿತರು ಸುಮಾರು 10 ಲಕ್ಷ ರೂಪಾಯಿ ಹಣ ಸಂಗ್ರಹಿಸಿ ಅಲ್ಲಿನ ವಕೀಲರಿಗೆ ನೀಡಿದ್ದರು. ವಂಚನೆಗೊಳಗಾಗಿ ಹಣ ಕಳೆದುಕೊಂಡ ಮಹಿಳೆಗೆ ಸುಮಾರು 6 ಲಕ್ಷ ರೂಪಾಯಿ ಹಣವನ್ನು ಪಾವತಿಸಲಾಗಿತ್ತು. ಆದರೂ ಬಿಡುಗಡೆ ಮಾತ್ರ ಸಾಧ್ಯವಾಗಿರಲಿಲ್ಲ. ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾದ ಹಿನ್ನೆಲೆಯಲ್ಲಿ ಚಂದ್ರಶೇಖರ್ ಅವರು ಇದ್ದ ಅಲ್ಲಿನ ಕಂಪನಿ ಚಂದ್ರಶೇಖರ್‌ ಅವರ ಬಿಡುಗಡೆಗೆ ಪ್ರಯತ್ನ ಆರಂಭಿಸಿತು. ಉಡುಪಿಯ ನಿವಾಸಿ ಪ್ರಸ್ತುತ ಸೌದಿಯಲ್ಲಿರುವ ಪ್ರಕಾಶ್ ಎಂಬವರು ಮತ್ತು ಅರುಣ್, ಕಬೀರ್ ಎಂಬವರು ಸೇರಿದಂತೆ ಚಂದ್ರಶೇಖರ್ ಅವರ ಗೆಳೆಯರೂ ಅವರ ಬಿಡುಗಡೆಗೆ ನಿರಂತರ ಪ್ರಯತ್ನ ಮಾಡುತ್ತಿದ್ದರು. ಈ ಪ್ರಯತ್ನಗಳ ಫಲವಾಗಿ ಇದೀಗ ಚಂದ್ರಶೇಖರ್ ಅವರ ಬಿಡುಗಡೆ ಸಾಧ್ಯವಾಗಿದೆ.

ಊರಲ್ಲಿ ನಡೆದಿತ್ತು ಮದುವೆ ಸಿದ್ಧತೆ: ಕಡಬ ತಾಲೂಕಿನ ಐತ್ತೂರು ಗ್ರಾಮದ ಮೂಜೂರು ನಿವಾಸಿ ದಿವಂಗತ ಕೆಂಚಪ್ಪ ಗೌಡ ಹಾಗೂ ಹೇಮಾವತಿ ದಂಪತಿಯ ಚಂದ್ರಶೇಖರ್‌ ಕೊನೆಯ ಪುತ್ರ. ಅವರಿಗೆ ಕಳೆದ ಜನವರಿಯಲ್ಲಿ ಊರಿನಲ್ಲಿ ಮದುವೆ ನಿಶ್ಚಿತಾರ್ಥ ನಿಗದಿಯಾಗಿತ್ತು. ಮದುವೆಯ ದಿನಾಂಕವೂ ಅಂತಿಮವಾಗಿತ್ತು. ಊರಲ್ಲಿ ಮದುವೆ ಸಿದ್ಧತೆ ನಡೆಯುತ್ತಿರುವಾಗಲೇ ಸೌದಿಯಲ್ಲಿ ಅವರ ಬಂಧನವಾಗಿತ್ತು.

ಈ ಕುರಿತು 'ಈಟಿವಿ ಭಾರತ' ಜೊತೆಗೆ ಮಾತನಾಡಿದ ಚಂದ್ರಶೇಖರ್ ಅವರ ಸಹೋದರ ಹರೀಶ್, ''ನನ್ನ ತಮ್ಮ ಚಂದ್ರಶೇಖರ್ ಇಂದು ಸೌದಿ ಜೈಲಿನಿಂದ ಬಿಡುಗಡೆಯಾಗಿ ಸಂಜೆ ಸುಮಾರು ಏಳು ಗಂಟೆ ವೇಳೆಗೆ ಮಂಗಳೂರು ತಲುಪಲಿದ್ದಾರೆ. ಅವರ ಅಮ್ಮ ಸೇರಿದಂತೆ ನಾವೆಲ್ಲರೂ ಸಂತೋಷದಲ್ಲಿದ್ದೇವೆ. ಅವರನ್ನು ಮನೆಗೆ ಕರೆತರಲು ಮಂಗಳೂರಿಗೆ ಹೊರಟಿದ್ದೇವೆ. ನಮಗೆ ನಮ್ಮ ಕಷ್ಟಕ್ಕೆ ಸೌದಿಯಲ್ಲಿರುವ ಉಡುಪಿಯ ಪ್ರಕಾಶ್ ಎಂಬವರು ಮತ್ತು ಚಂದ್ರಶೇಖರ್ ಅವರ ಹಲವು ಗೆಳೆಯರು ತುಂಬಾ ಸಹಾಯ ಮಾಡಿದ್ದಾರೆ. ಅವರೆಲ್ಲರ ನೆರವು ಇಲ್ಲದಿದ್ದರೆ ಚಂದ್ರಶೇಖರ್ ಅವರ ಬಿಡುಗಡೆ ಇಂದಿಗೂ ಸಾಧ್ಯವಾಗುತ್ತಿರಲಿಲ್ಲ. ಅವರಿಗೆಲ್ಲಾ ನಾವು ಸದಾ ಆಭಾರಿಯಾಗಿದ್ದೇವೆ. ಪ್ರಕಾಶ್ ಅವರ ಶ್ರಮ ಅಪಾರವಿದೆ. ಅವರು ಬಿಡುಗಡೆಯ ಪ್ರಯತ್ನ ಮಾಡುವುದರ ಜೊತೆಗೆ ಅಲ್ಲಿನ ಜೈಲಿಗೆ ಭೇಟಿಯಾಗಿ ಚಂದ್ರಶೇಖರ್ ಅವರಿಗೆ ಸಮಾಧಾನ ಹೇಳುತ್ತಿದ್ದರು. ಪ್ರಕಾಶ್ ಅವರ ಶ್ರಮ ಇಲ್ಲದಿದ್ದರೆ ಬಿಡುಗಡೆ ಇನ್ನೂ ಒಂದು ವಾರಗಳು ತಡ ಆಗ್ತಾ ಇತ್ತು. ಅವರಿಗೆ ಮತ್ತು ಗೆಳೆಯರ ಬಳಗಕ್ಕೆ, ಬಿಡುಗಡೆಗೆ ಶ್ರಮಿಸಿದ ಎಲ್ಲರಿಗೂ ನಾವು ಕೃತಜ್ಞತೆ ಸಲ್ಲಿಸುತ್ತಿದ್ದೇವೆ. ಸರ್ಕಾರ ಮತ್ತು ನಮ್ಮ ಸಂಸದರ ಕಡೆಯಿಂದ ಅಲ್ಲಿಗೆ ಪತ್ರ ಒಂದು ಕಳುಹಿಸಿದ್ದು ಬಿಟ್ಟರೆ ಯಾವುದೇ ಬೆಂಬಲ, ಸಹಕಾರ ಲಭ್ಯವಾಗಿಲ್ಲ. ಇದು ನಿಜಕ್ಕೂ ಬಡವರಾದ ನಮಗೆ ಬೇಸರ ತರಿಸುತ್ತಿದೆ'' ಎಂದು ಅವರು ಹೇಳಿದರು.

ಇದನ್ನೂ ಓದಿ: ಹಾವೇರಿ: ನಾಳೆ 500ಕ್ಕೂ ಹೆಚ್ಚು ರೈತರಿಂದ ತೆಲಂಗಾಣ ಚಲೋ

Last Updated : Nov 21, 2023, 4:03 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.