ETV Bharat / state

ಸ್ನೇಹಿತರೊಂದಿಗೆ ಈಜಲು ಹೋದ ಯುವಕ ನೀರಲ್ಲಿ ಮುಳುಗಿ ಸಾವು

ಸ್ನೇಹಿತರೊಂದಿಗೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಬೆಳುವಾಯಿ ಗ್ರಾಪಂ ವ್ಯಾಪ್ತಿಯ ಮಠದಕೆರೆಯಲ್ಲಿ ನಡೆದಿದೆ.

author img

By

Published : Nov 8, 2020, 11:02 PM IST

ಸ್ನೇಹಿತರೊಂದಿಗೆ ಈಜಲು ಹೋದ ಯುವಕ ನೀರಲ್ಲಿ ಮುಳುಗಿ ಸಾವು
ಸ್ನೇಹಿತರೊಂದಿಗೆ ಈಜಲು ಹೋದ ಯುವಕ ನೀರಲ್ಲಿ ಮುಳುಗಿ ಸಾವು

ಮಂಗಳೂರು: ಸ್ನೇಹಿತರೊಂದಿಗೆ ಈಜಲು ಹೋದ ಯುವಕನೊಬ್ಬ ಬೆಳುವಾಯಿ ಗ್ರಾಪಂ ವ್ಯಾಪ್ತಿಯ ಮಠದಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

ಈಜಲು ಹೋದ ಯುವಕ ನೀರಲ್ಲಿ ಮುಳುಗಿ ಸಾವು

ಸುರತ್ಕಲ್ ಸಮೀಪದ ಕಾಟಿಪಳ್ಳ ನಿವಾಸಿ ನಿಹಾಲ್ ಶಾ ( 20 ) ಮೃತಪಟ್ಟ ಯುವಕ. ನಿಹಾಲ್ ಶಾ ತನ್ನ ಏಳು ಮಂದಿ ಸ್ನೇಹಿತರೊಡನೆ ಭಾನುವಾರ ಸಾಯಂಕಾಲ ಮಠದಕೆರೆಗೆ ಈಜಲು ಬಂದಿದ್ದ. ಈಜುವಾಗ ಏಕಾಏಕಿ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

ಬೆಳುವಾಯಿಯ ಅಂಥೋಣಿ ಎಂಬುವರು ನಿಹಾಲ್ ಶಾ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಈ ಸಂಬಂಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.