ಬೆಳ್ತಂಗಡಿ(ದಕ್ಷಿಣ ಕನ್ನಡ): ನಾನು ಕಾಂಗ್ರೆಸ್ ಸೇರುವ ಬಗ್ಗೆ ಈಗಾಗಲೇ ಸ್ಪಷ್ಟಪಡಿಸಿದ್ದೇನೆ. ನನ್ನ ಕ್ಷೇತ್ರದ ಜನತೆಯ ಅಭಿಪ್ರಾಯ, ಅಭಿಮಾನಿಗಳ ಒತ್ತಡದಿಂದಾಗಿ ಪಕ್ಷ ಸೇರುವ ಬಗ್ಗೆ ತೀರ್ಮಾನಿಸಿದ್ದೇನೆ. ಈ ಬಗ್ಗೆ ಸಿದ್ದರಾಮಯ್ಯ ಅವರ ಗಮನಕ್ಕೆ ತರಲಾಗಿದೆ. ಬೆಳಗಾವಿ ವಿಧಾನಮಂಡಲ ಅಧಿವೇಶನ ಮುಗಿದ ಕೂಡಲೇ ದಿನ ನಿಗದಿಗೊಳಿಸುವ ಬಗ್ಗೆ ತಿಳಿಸಿದ್ದಾರೆ ಎಂದು ವೈಎಸ್‌ವಿ ದತ್ತ ಹೇಳಿದ್ದಾರೆ. ಈ ಮೂಲಕ ಹಲವು ದಿನಗಳಿಂದ ಹರಿದಾಡುತ್ತಿದ್ದ ಉಹಾಪೋಹಗಳಿಗೆ ತೆರೆ ಎಳೆದರು.
ಇದನ್ನೂ ಓದಿ: ಕಮಿಷನ್ ಇಲ್ಲದೆ ಯಾವುದೇ ಇಲಾಖೆಗಳು ನಡೆಯುತ್ತಿಲ್ಲ: ಬಿಜೆಪಿ ವಿರುದ್ಧ ಉಗ್ರಪ್ಪ ವಾಗ್ದಾಳಿ