ETV Bharat / state

ಹಳೆಯಂಗಡಿ ಗ್ರಾಮ ಪಂಚಾಯತ್​ ವಿಸರ್ಜನೆ ವಿಚಾರ: ದ.ಕ ಸಾಮಾನ್ಯ ಸಭೆಯಲ್ಲಿ ಗದ್ದಲ

ಮಂಗಳೂರು ತಾಲೂಕಿನ ಹಳೆಯಂಗಡಿ ಗ್ರಾಮ ಪಂಚಾಯತನ್ನು ವಿಸರ್ಜನೆ ಮಾಡಬೇಕೆಂಬ ನಿರ್ಧಾರವನ್ನು ಕಳೆದ ಬಾರಿ ನಡೆದಿದ್ದ ಜಿಲ್ಲಾ ಪಂಚಾಯತ್​ ಸಭೆಯಲ್ಲಿ ಕೈಗೆತ್ತಿಕೊಳ್ಳಲಾಗಿತ್ತು. ಆದರೆ ಇಂದು ನಡೆದ ದ.ಕ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಈ ವಿಚಾರವೇ ಗದ್ದಲಕ್ಕೆ ಕಾರಣವಾಗಿದೆ

managalore
ಹಳೆಯಂಗಡಿ ಗ್ರಾಮ ಪಂಚಾಯತ್​ ವಿಸರ್ಜನೆ ವಿಚಾರ: ದ.ಕ ಸಾಮಾನ್ಯ ಸಭೆಯಲ್ಲಿ ಗದ್ದಲ
author img

By

Published : Nov 26, 2019, 1:52 PM IST

ಮಂಗಳೂರು: ಕಳೆದ ಬಾರಿ ನಡೆದಿದ್ದ ಜಿಲ್ಲಾ ಪಂಚಾಯತ್​ ಸಭೆಯಲ್ಲಿ ಮಂಗಳೂರು ತಾಲೂಕಿನ ಹಳೆಯಂಗಡಿ ಗ್ರಾಮ ಪಂಚಾಯತನ್ನು ವಿಸರ್ಜನೆ ಮಾಡಬೇಕೆಂಬ ನಿರ್ಧಾರವನ್ನು ಕೈಗೆತ್ತಿಕೊಳ್ಳಲಾಗಿತ್ತು. ಆದರೆ ಇಂದು ನಡೆದ ದ.ಕ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಈ ವಿಚಾರವೇ ಗದ್ದಲಕ್ಕೆ ಕಾರಣವಾಗಿದೆ.

ಹಳೆಯಂಗಡಿ ಗ್ರಾಮ ಪಂಚಾಯತ್​ ವಿಸರ್ಜನೆ ವಿಚಾರ: ದ.ಕ ಸಾಮಾನ್ಯ ಸಭೆಯಲ್ಲಿ ಗದ್ದಲ

ದ.ಕ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅಧ್ಯಕ್ಷತೆಯಲ್ಲಿ ಇಂದು ಸಾಮಾನ್ಯ ಸಭೆ ನಡೆಯಿತು. ಕಳೆದ ಬಾರಿ ತೆಗೆದುಕೊಂಡ ಹಳೆಯಂಗಡಿ ಗ್ರಾಮ ಪಂಚಾಯತ್ ವಿಸರ್ಜನೆ ನಿರ್ಧಾರಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದು, ಈ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದರು. ಆದರೆ ಗ್ರಾಮ ಪಂಚಾಯತ್​ ವಿಸರ್ಜನೆಯಾಗಬೇಕು- ಬೇಡ ಎಂಬ ವಿಚಾರದಲ್ಲಿ ಆಡಳಿತ ಪಕ್ಷ ಹಾಗೂ ವಿಪಕ್ಷದ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು.

ಇನ್ನು ಇದೇ ವೇಳೆ, ದಕ್ಷಿಣ ಕನ್ನಡ ಜಿಲ್ಲೆಯ ನಿರ್ವಾಹಕರ ಮೇಲೆ ಕೆಎಸ್ಆರ್​ಟಿಸಿ ಅಧಿಕಾರಿಗಳು ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ದ.ಕ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ ಆರೋಪಿಸಿದ್ದು, ಇಂತಹ ಘಟನೆ ಮುಂದೆ ಆಗಬಾರದು ಎಂದು ಸದಸ್ಯರು ಎಚ್ಚರಿಕೆ ನೀಡಿದರು.

Intro:ಮಂಗಳೂರು: ಮಂಗಳೂರು ತಾಲೂಕಿನ ಹಳೆಯಂಗಡಿ ಗ್ರಾಮ ಪಂಚಾಯತ್ ನ್ನು ವಿಸರ್ಜನೆ ಮಾಡಲು ಕಳೆದ ಜಿ.ಪಂ ನಲ್ಲಿ ಮಾಡಿದ ನಿರ್ಧಾರ ಇಂದು ದ.ಕ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಗದ್ದಲಕ್ಕೆ ಕಾರಣವಾಯಿತು.

Body:ಇಂದು ನಡೆದ ದ.ಕ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಕಳೆದ ಬಾರಿ ತೆಗೆದುಕೊಂಡ ಹಳೆಯಂಗಡಿ ಗ್ರಾಮ ಪಂಚಾಯತ್ ವಿಸರ್ಜನಾ ನಿರ್ಧಾರಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿರುವ ಬಗ್ಗೆ ಮಾಹಿತಿಯನ್ನು ಅಧಿಕಾರಿಗಳು ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ವಿಪಕ್ಷ ಕಾಂಗ್ರೆಸ್ ಪಕ್ಷದ ಕೆ ಎಸ್ ಮೊಹಮ್ಮದ್ ಅವರು ತಾನು ಕಳೆದ ಸಭೆಯಲ್ಲಿ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದೆ. ಈ ಮೂಲಕ ಜಿ. ಪಂ ಅವಮಾನ ಮಾಡಿಸಿಕೊಳ್ಳುವುದು ಬೇಡ ಎಂದಿದ್ದೆ. ಆದರೆ ಈಗ ಅವಮಾನ ಮಾಡಿಸಿಕೊಂಡಂತಾಗಿದೆ ಎಂದರು. ಇದಕ್ಕೆ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದಾಗ ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು.

ಕೆ ಎಸ್ ಆರ್ ಟಿ ಸಿ ಅಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆ ನಿರ್ವಾಹಕರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ದ.ಕ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ ಆಕ್ರೋಶ ವ್ಯಕ್ತಪಡಿಸಿದರು. ಕೆ ಎಸ್ ಆರ್ ಟಿ ಸಿ ಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ನೌಕರರಿಗೆ ವಿಶ್ರಾಂತಿ ನೀಡದೆ ದಬ್ಬಾಳಿಕೆ ನಡೆಸಲಾಗುತ್ತಿದೆ ಎಂದು ಜಿ.ಪಂ ಉಪಾಧ್ಯಕ್ಷೆ ಪ್ರಸ್ತಾಪ ಮಾಡಿದಾಗ ಸದಸ್ಯರು ಈ ರೀತಿ ಅನ್ಯಾಯ ಮುಂದೆ ಆಗಬಾರದು ಎಂದು ಎಚ್ಚರಿಸಿದರು.

ಸಭೆ ಆರಂಭಕ್ಕೆ ಮುನ್ನ ರಾಷ್ಟ್ರಮಟ್ಟದ ಗ್ರಾಮ ಪಂಚಾಯತ್ ಅಭಿವೃದ್ಧಿ ಯೋಜನೆ ಪುರಸ್ಕಾರ ಪಡೆದ ಗುರುಪುರ ಗ್ರಾಮಪಂಚಾಯತ್ ಗೆ, ದೀನದಯಾಳ್ ಪಂಚಾಯತ್ ಅಭಿವೃದ್ಧಿ ಪುರಸ್ಕಾರ ಪಡೆದ ಮೆನ್ನಬೆಟ್ಟು ಗ್ರಾ. ಪಂ ಗೆ ಅಭಿನಂದಿಸಲಾಯಿತು.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.