ದಾವಣಗೆರೆ: ರಾಜ್ಯ ಸರ್ಕಾರ ವಾಲ್ಮೀಕಿ ಗುರುಪೀಠದ ಅಭಿವೃದ್ಧಿಗೆ ಪ್ರಸಕ್ತ ಸಾಲಿನಲ್ಲಿ ರೂ. 10.8 ಕೋಟಿ ಅನುದಾನ ಮಂಜೂರು ಮಾಡಿದ್ದು, ಜಿಲ್ಲಾಧಿಕಾರಿ ಖಾತೆಗೆ ಈಗಾಗಲೇ ರೂ. 5.4 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಹರಿಹರ ತಾಲೂಕಿನ ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿನ ಆವರಣದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಜನಜಾಗೃತಿ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಾಲ್ಮೀಕಿ ಸಮುದಾಯದವರು ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಮುಂದುವರೆಯಲು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲಾಗಿದೆ. ಮಹರ್ಷಿ ವಾಲ್ಮೀಕಿ ಅವರು ಪ್ರಪಂಚದ ಚರಿತ್ರೆಯ ಧೃವತಾರೆ ಎಂದರು.
![ವಾಲ್ಮೀಕಿ ಗುರುಪೀಠದಲ್ಲಿನ ಆವರಣದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಜನಜಾಗೃತಿ ಸಮಾವೇಶ](https://etvbharatimages.akamaized.net/etvbharat/prod-images/kn-dvg-01-09-cm-anudaana-av-7204336_09022021184305_0902f_1612876385_800.jpg)
ಭಾರತೀಯ ಸಂಸ್ಕೃತಿಯಲ್ಲಿ ಅವರ ಕೊಡುಗೆ ಅಪಾರವಾದದ್ದು. ವಾಲ್ಮೀಕಿ ಗುರುಪೀಠ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರದಿಂದ ಅನೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಯುವಜನರ ಅಭಿವೃದ್ಧಿಗಾಗಿ ಆರ್ಥಿಕ ನೆರವು ನೀಡಲಾಗುತ್ತಿದೆ ಎಂದರು.