ದಾವಣಗೆರೆ: ಸಿಡಿಲು ಬಡಿದು 10ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹರಿಹರ ತಾಲೂಕಿನ ಬೆಳ್ಳೂಡಿ ಗ್ರಾಮದಲ್ಲಿ ನಡೆದಿದೆ.
ಕಳೆದ ತಡರಾತ್ರಿ ಸುರಿದ ಭಾರೀ ಮಳೆಯಲ್ಲಿ ನೆನೆದು ಕುರಿಗಾಹಿಗಳು ಕೂಡ ಅಸ್ವಸ್ಥರಾಗಿದ್ದಾರೆ. ಸಿಡಿಲಿನ ಹೊಡೆತಕ್ಕೆ ಸ್ಥಳದಲ್ಲೇ 10 ಕುರಿಗಳು ಸಾವನ್ನಪ್ಪಿದ್ದು, ಇನ್ನು ಕೆಲವು ಜೀವನ್ಮರಣದ ನಡುವೆ ಹೋರಾಡುತ್ತಿವೆ.
ಓದಿ: ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಕುಖ್ಯಾತ ಕಳ್ಳನ ಕಾಲಿಗೆ ಗುಂಡೇಟು
ರಾತ್ರಿಯಿಡೀ ಮಳೆ ಸುರಿದಿದ್ದರಿಂದ ಜಮೀನೊಂದರಲ್ಲಿ ನೆಲೆ ಕಂಡುಕೊಂಡಿದ್ದ ಕುರಿಗಾಹಿಗಳು, ಮಳೆಯಿಂದ ರಕ್ಷಿಸಿಕೊಳ್ಳಲಾಗದೆ ಸಂಕಷ್ಟಕ್ಕೀಡಾಗಿದ್ದರು. ಇದನ್ನು ಗಮನಿಸಿದ ಕಾಗಿನೆಲೆ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಸಂಕಷ್ಟದಲ್ಲಿದ್ದ ಕುರಿಗಾಹಿಗಳಿಗೆ ಆಸರೆಯಾಗಿ ಬೆಳ್ಳೂಡಿ ಕನಕ ಶಾಖಾ ಮಠದಲ್ಲಿ ಊಟದ ವ್ಯವಸ್ಥೆ ಮಾಡಿದ್ದರು.
ಬಳಿಕ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಹಾರಕ್ಕಾಗಿ ಸರ್ಕಾರಕ್ಕೆ ಒತ್ತಾಯಿಸಿದರು. ಇನ್ನು ಹತ್ತಕ್ಕು ಹೆಚ್ಚು ಕುರಿಗಳನ್ನು ಕಳೆದುಕೊಂಡು ಕಂಗಾಲಾಗಿರುವ ಕುರಿಗಾಹಿಗಳು ಲಕ್ಷಗಟ್ಟಲೆ ನಷ್ಟ ಅನುಭವಿಸಿದ್ದಾರೆ.