ETV Bharat / state

ಫೆ. 28ರಂದು ದಾವಣಗೆರೆ ವಿಶ್ವವಿದ್ಯಾನಿಲಯದ 10ನೇ ಘಟಿಕೋತ್ಸವ: ಮೂವರಿಗೆ ಗೌರವ ಡಾಕ್ಟರೇಟ್ - etv bharat kannada

ದಾವಣಗೆರೆ ವಿಶ್ವವಿದ್ಯಾನಿಲಯದ 10ನೇ ಘಟಿಕೋತ್ಸವ - ಭಾಗಿಯಾಗಲಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ - ಪದವಿ ಸ್ವೀಕರಿಸಲಿರುವ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳ ಒಟ್ಟು 13,978 ವಿದ್ಯಾರ್ಥಿಗಳು

10th Convocation of Davangere University on 28th
28ರಂದು ದಾವಣಗೆರೆ ವಿಶ್ವವಿದ್ಯಾನಿಲಯದ 10ನೇ ಘಟಿಕೋತ್ಸವ:ಮೂವರಿಗೆ ಗೌರವ ಡಾಕ್ಟರೇಟ್
author img

By

Published : Feb 25, 2023, 5:21 PM IST

ದಾವಣಗೆರೆ ವಿವಿ ಉಪ ಕುಲಪತಿ ಬಿ.ಡಿ. ಕುಂಬಾರ

ದಾವಣಗೆರೆ: ಫೆ.28ರಂದು ದಾವಣಗೆರೆ ವಿಶ್ವವಿದ್ಯಾನಿಲಯದ ಹತ್ತನೇ ಘಟಿಕೋತ್ಸವ ಶಿವಗಂಗೋತ್ರಿ ಕ್ಯಾಂಪಸ್​ನಲ್ಲಿ ನಡೆಯಲಿದ್ದು, ಈ ಬಾರಿಯ ಘಟಿಕೋತ್ಸವದಲ್ಲಿ ಮೂವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಗುವುದೆಂದು ಉಪ ಕುಲಪತಿ ಬಿ.ಡಿ. ಕುಂಬಾರ ಮಾಹಿತಿ ನೀಡಿದ್ದಾರೆ. ದಾವಣಗೆರೆ ವಿವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಟಿ.ಎಂ. ರಾಜಶೇಖರಯ್ಯ, ಅಥಣಿ ಎಸ್ ವೀರಣ್ಣ, ಎಂ.ಎಸ್. ಶಿವಣ್ಣ ಅವರು ಡಾಕ್ಟರೇಟ್​ ಪದವಿಗೆ ಭಾಜನರಾಗಿದ್ದಾರೆಂದು ಮಾಹಿತಿ ನೀಡಿದರು.

ವಿವಿಯ ಹತ್ತನೇ ಘಟಿಕೋತ್ಸವದಲ್ಲಿ ರಾಜ್ಯಪಾಲರು ಹಾಗೂ ಕುಲಾಧಿಪತಿಗಳಾದ ಥಾವರ್ ಚಂದ್ ಗೆಹ್ಲೋಟ್​ ಅಧ್ಯಕ್ಷತೆ ವಹಿಸಲಿದ್ದು, ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಕಾರ್ಯಕ್ರಮದಲ್ಲಿ ಭಾಗಿಯಾಲಿದ್ದಾರೆ, ಇದಲ್ಲದೆ ಮುಖ್ಯ ಅತಿಥಿಗಳಾಗಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಪ್ರೊ. ಟಿ. ಜಿ. ಸೀತಾರಾಮ್ ವೇದಿಕೆ ಹಂಚಿಕೊಳ್ಳಲಿದ್ದಾರೆ.

ಇನ್ನು, ಈ ಬಾರಿಯ ಘಟಿಕೋತ್ಸವದಲ್ಲಿ ಬಬ್ಬರು ಮಾಸ್ಟರ್ ಆಫ್ ಫಿಲಾಸಫಿ (ಎಂ.ಫಿಲ್) ಮತ್ತು ನಾಲ್ಕು ಮಂದಿ ಮಹಿಳೆರು ಹಾಗೂ ಹತ್ತು ಮಂದಿ ಪುರುಷರು ಸೇರಿ ಒಟ್ಟು 14 ಜನರು ಡಾಕ್ಟರ್ ಆಫ್ ಫಿಲಾಸಫಿ (ಪಿ.ಹೆಚ್‌.ಡಿ) ಪದವಿ ಸ್ವೀಕರಿಸಲಿದ್ದಾರೆ. 2021-22ನೇ ಸಾಲಿನ ಸ್ನಾತಕ ಪದವಿಯನ್ನು 7,219 ವಿದ್ಯಾರ್ಥಿನಿಯರು ಹಾಗೂ 4,900 ವಿದ್ಯಾರ್ಥಿಗಳು ಸೇರಿ ಒಟ್ಟು 12,179 ವಿದ್ಯಾರ್ಥಿಗಳು ಸ್ವೀಕರಿಸಲಿದ್ದಾರೆ ಎಂದು ಉಪ ಕುಲಪತಿ ಬಿ ಡಿ ಕುಂಬಾರ ತಿಳಿಸಿದರು.

2021-22ನೇ ಸಾಲಿನ ಸ್ನಾತಕೋತ್ತರ ಪದವಿಗಳಲ್ಲಿ 1,161 ವಿದ್ಯಾರ್ಥಿನಿಯರು ಹಾಗೂ 638 ವಿದ್ಯಾರ್ಥಿಗಳು ಸೇರಿ ಒಟ್ಟು 1,700 ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ಪಡೆಯಲಿದ್ದು, ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳು ಸೇರಿ ಒಟ್ಟು 13,978 ವಿದ್ಯಾರ್ಥಿಗಳು ಪದವಿ ಪಡೆಯಲಿದ್ದಾರೆ. ಈ ಬಾರಿ ಒಟ್ಟು 81 ಸ್ವರ್ಣ ಪದಕಗಳನ್ನು ನೀಡಲಿದ್ದು, ಸ್ನಾತಕ ಪದವಿಯಲ್ಲಿ 10 ವಿದ್ಯಾರ್ಥಿನಿಯರು ಹಾಗೂ ನಾಲ್ಕು ವಿದ್ಯಾರ್ಥಿಗಳಿಗೆ ಸೇರಿ ಒಟ್ಟು 14 ವಿದ್ಯಾರ್ಥಿಗಳು 22 ಸ್ವರ್ಣ ಪದಕಗಳನ್ನು ಪಡೆಯಲಿದ್ದಾರೆ. ಹಾಗೂ ಸ್ನಾತಕೋತ್ತರ ಪದವಿಯಲ್ಲಿ 22 ವಿದ್ಯಾರ್ಥಿನಿಯರು ಹಾಗೂ 9 ವಿದ್ಯಾರ್ಥಿಗಳು ಸೇರಿ ಒಟ್ಟು 31 ವಿದ್ಯಾರ್ಥಿಗಳು 59 ಸ್ವರ್ಣ ಪದಕಗಳನ್ನು ಪಡೆಯಲಿದ್ದಾರೆ.

ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳಲ್ಲಿ ಒಟ್ಟು 32 ವಿದ್ಯಾರ್ಥಿನಿರು ಹಾಗೂ 13 ವಿದ್ಯಾರ್ಥಿಗಳು ಸೇರಿ ಒಟ್ಟು 45 ವಿದ್ಯಾರ್ಥಿಗಳು 81 ಚಿನ್ನದ ಪದಕಗಳನ್ನು ಪಡೆದುಕೊಳ್ಳಲಿದ್ದಾರೆ. ಈ ಸಾಲಿನಲ್ಲಿ ವಾಣಿಜ್ಯಶಾಸ್ತ್ರ (ಎಂ.ಕಾಂ) ವಿಭಾಗದ ಹಾಲಮ್ಮ ಬಿ, 5 ಹಾಗೂ ಜೀವರಸಾಯನಶಾಸ್ತ್ರ ವಿಭಾಗದ ಕೆ. ಅರುಣ್ 5 ಸ್ವರ್ಣ ಪದಕಗಳನ್ನು ಪಡೆಯಲಿದ್ದಾರೆ. 2021-22ನೇ ಶೈಕ್ಷಣಿಕ ವರ್ಷದಲ್ಲಿ ಸ್ನಾತಕ ಪದವಿಯಲ್ಲಿ ಶೇ 73.22% ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಶೇ 96.82% ಫಲಿತಾಂಶ ಬಂದಿದೆ ಎಂದು ವಿವರಿಸಿದರು.

ಇದನ್ನೂ ಓದಿ:ದಾವಣಗೆರೆ: ದಂತ ವೈದ್ಯಾಧಿಕಾರಿ ಹುದ್ದೆಯ ಆಸೆ ತೋರಿಸಿ ವೈದ್ಯರಿಂದಲೇ ವಂಚನೆ ಆರೋಪ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.