ದಾವಣಗೆರೆ: ಜಿಲ್ಲೆಯಲ್ಲಿ 162 ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 14,698ಕ್ಕೇರಿದೆ. ಮೂವರು ಸೋಂಕಿಗೆ ಬಲಿಯಾಗಿದ್ದು, ಇದುವರೆಗೆ ಒಟ್ಟು 234 ಜನರು ಮೃತಪಟ್ಟಿದ್ದಾರೆ.
ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ 85 ವರ್ಷದ ವೃದ್ಧ ಹಾಗೂ 53 ವರ್ಷದ ಮಹಿಳೆ ಹಾಗೂ ಜ್ವರದಿಂದ ಬಳಲುತ್ತಿದ್ದ 70 ವರ್ಷದ ವೃದ್ಧ ಕೊರೊನಾ ಸೋಂಕು ತಗುಲಿ ಸಾವನ್ನಪ್ಪಿದ್ದಾರೆ.
137 ಸೋಂಕಿತರು ಕೊರೊನಾ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದರೆ, 11,639 ಜನರು ಡಿಸ್ಚಾರ್ಜ್ ಆಗಿದ್ದಾರೆ. ಪ್ರಸ್ತುತ 2825 ಕೊರೊನಾ ಸೋಂಕಿತರಿದ್ದು, ಚಿಕಿತ್ಸೆ ಮುಂದುವರಿದಿದೆ.