ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲೂಕಿನಲ್ಲಿರುವ ಕೆಲ ವಸತಿ ಶಾಲೆಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದೆ. ಹೊನ್ನಾಳಿ ತಾಲೂಕಿನ ಎಚ್.ಕಡದಕಟ್ಟೆಯಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ 35 ವಿದ್ಯಾರ್ಥಿನಿಯರ ಪೈಕಿ 18 ಮಕ್ಕಳಿಗೆ ಕೊರೊನಾ ದೃಢಪಟ್ಟಿದೆ. ಮಾಹಿತಿ ತಿಳಿದ ಶಾಸಕ ಎಂ.ಪಿ. ರೇಣುಕಾಚಾರ್ಯ, ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು.
ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಾಗ ವಿದ್ಯಾರ್ಥಿನಿಯರು ಕಣ್ಣೀರು ಹಾಕಿದ ಪ್ರಸಂಗ ಕೂಡ ನಡೆದಿದೆ. ಇದೇ ವೇಳೆ ವಿದ್ಯಾರ್ಥಿನಿಯರಿಗೆ ಶಾಸಕ ರೇಣುಕಚಾರ್ಯ ಧೈರ್ಯ ಹೇಳಿ, ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲು ಆತ್ಮಸ್ಥೈರ್ಯ ತುಂಬಿದರು.
ವಸತಿ ಶಾಲೆಗಳಲ್ಲಿ ಹೆಚ್ಚೆಚ್ಚು ಕೊರೊನಾ ಪ್ರಕರಣಗಳು ಕಂಡು ಬರುತ್ತಿರುವುದರಿಂದ ಜಿಲ್ಲಾಡಳಿತ ರಜೆ ಘೋಷಿಸಿದೆ.
ಜಾಹಿರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ