ETV Bharat / state

ದಾವಣಗೆರೆಯಲ್ಲಿಂದು ಕೊರೊನಾಗೆ ಇಬ್ಬರು ಬಲಿ; 20 ಹೊಸ ಪ್ರಕರಣ

ಮಹಾಮಾರಿ ಸೋಂಕಿಗೆ ಇಬ್ಬರು ಬಲಿಯಾಗಿದ್ದು, 20 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಂಕಿತರ ಸಂಖ್ಯೆ 534ಕ್ಕೇರಿದ್ದು, 104 ಸಕ್ರಿಯ ಪ್ರಕರಣಗಳಿಗೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Davanagere corona case
Davanagere corona case
author img

By

Published : Jul 12, 2020, 9:57 PM IST

ದಾವಣಗೆರೆ: ಜಿಲ್ಲೆಯಲ್ಲಿಂದು ಕೊರೊನಾಗೆ ಇಬ್ಬರು ಬಲಿಯಾಗಿದ್ದು, ಸಾವನ್ನಪ್ಪಿದವರ ಸಂಖ್ಯೆ 20ಕ್ಕೇರಿದೆ. ಜೊತೆಗೆ ಹೊಸದಾಗಿ 20 ಮಂದಿಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಹರಿಹರದ 55 ವರ್ಷದ ಮಹಿಳೆ ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದು, ಜುಲೈ 11ರಂದು ಮೃತಪಟ್ಟಿದ್ದರೆ, ಹಾವೇರಿ ಜಿಲ್ಲೆಯ ಕನವಲ್ಲಿ‌ ಗ್ರಾಮದ 60 ವರ್ಷದ ವೃದ್ಧ ಕೊರೊನಾಗೆ ಬಲಿಯಾಗಿದ್ದಾರೆ.

ಜಿಲ್ಲೆಯಲ್ಲಿ ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಇಬ್ಬರು ಹಾಗೂ ಐಎಲ್ಐ ನಿಂದ ಬಳಲುತ್ತಿದ್ದ 12 ಮಂದಿಗೆ ಸೋಂಕು ದೃಢಪಟ್ಟಿದೆ. ನಾಲ್ವರ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ. ಇಂದು ದಾವಣಗೆರೆ 14, ಹರಿಹರ 2, ಜಗಳೂರು 2, ಹೊನ್ನಾಳಿಯಲ್ಲಿ 2 ಪ್ರಕರಣಗಳು ದೃಢಪಟ್ಟಿವೆ.

66 ಮಂದಿ ಗುಣಮುಖ: ದಾವಣಗೆರೆ, ಹೊನ್ನಾಳಿ, ಜಗಳೂರು, ಹರಿಹರ ಸೇರಿದಂತೆ ಜಿಲ್ಲೆಯ ಒಟ್ಟು 66 ಮಂದಿ ಕೊರೊನಾ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದು, ಇದುವರೆಗೆ 410 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.

ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 534ಕ್ಕೇರಿದ್ದು, 104 ಸಕ್ರಿಯ ಪ್ರಕರಣಗಳಿಗೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.