ದಾವಣಗೆರೆ: ಬ್ರಿಟನ್ನಿಂದ ದಾವಣಗೆರೆ ಜಿಲ್ಲೆಗೆ ಆಗಮಿಸಿದ 20 ಜನರ ಕೊರೊನಾ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾತನಾಡಿದ ಅವರು ಕೊರೊನಾ ವ್ಯಾಕ್ಸಿನ್ಗಾಗಿ ದಾವಣಗೆರೆ ಜಿಲ್ಲಾಡಳಿತ ಸಿದ್ಧತೆ ನಡೆಸಿದೆ. ವ್ಯಾಕ್ಸಿನ್ಗಾಗಿಯೇ ಕೋಣೆಗಳನ್ನು ಮತಗಟ್ಟೆಗಳ ಮಾದರಿಯಲ್ಲಿ ಸಿದ್ಧ ಪಡಿಸಲಾಗಿದೆ. ವ್ಯಾಕ್ಸಿನ್ ಬಗ್ಗೆ ಸಿಬ್ಬಂದಿಗೆ ತರಬೇತಿ ಕೂಡ ನೀಡಿದ್ದು, ಮೊದಲ ಹಂತದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗೆ, ಬಳಿಕ ಪೊಲೀಸರಿಗೆ, ಪೌರಕಾರ್ಮಿಕರು, ಯೋಧರಿಗೆ ವ್ಯಾಕ್ಸಿನ್ ನೀಡುತ್ತೇವೆ. ಬಳಿಕ 60 ವರ್ಷಗಳ ಮೇಲ್ಪಟ್ಟ ವೃದ್ಧರಿಗೆ ವ್ಯಾಕ್ಸಿನ್ ನೀಡಲಾಗುತ್ತದೆ ಎಂದು ಅವರು ತಿಳಿಸಿದರು.
ಇನ್ನು ವ್ಯಾಕ್ಸಿನ್ ಬಗ್ಗೆ ಹರಿಬಿಡಲಾಗುತ್ತಿರುವ ಸುಳ್ಳು ಸುದ್ದಿಗಳನ್ನು ನಂಬದಂತೆ ಜನರಿಗೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.