ದಾವಣಗೆರೆ: ಜಿಲ್ಲೆಯಲ್ಲಿ 237 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 6507 ಕ್ಕೆ ಏರಿಕೆಯಾಗಿದೆ.
ಇಂದು ದಾವಣಗೆರೆ 90, ಹರಿಹರ 15, ಜಗಳೂರು 17, ಚನ್ನಗಿರಿ 43, ಹೊನ್ನಾಳಿ 68, ಹೊರ ಜಿಲ್ಲೆಯಿಂದ ಬಂದಿದ್ದ ನಾಲ್ವರಲ್ಲಿ ವೈರಾಣು ಇರುವುದು ದೃಢಪಟ್ಟಿದೆ.
ಜಿಲ್ಲೆಯಲ್ಲಿ ಇಂದು 158 ಮಂದಿ ಕೊರೊನಾದಿಂದ ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಇದುವರೆಗೆ ಒಟ್ಟು 4388 ಜನರು ಡಿಸ್ಚಾರ್ಜ್ ಆಗಿದ್ದಾರೆ.
ಮೃತಪಟ್ಟವರ ವಿವರ:
ಇಂದು ಜಿಲ್ಲೆಯಲ್ಲಿ ಸೋಂಕಿಗೆ ಏಳು ಮಂದಿ ಬಲಿಯಾಗಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 148 ಕ್ಕೆ ಏರಿಕೆಯಾಗಿವೆ.
ದಾವಣಗೆರೆಯ ಐವರು, ಚನ್ನಗಿರಿ ತಾಲೂಕಿನ ಹಿರೇಮಳಲಿ ಗ್ರಾಮದ 62 ವರ್ಷದ ವೃದ್ಧೆ, ಹಾವೇರಿ ಜಿಲ್ಲೆಯ ಗುಡಿಹೊನ್ನಟ್ಟಿ ಗ್ರಾಮದ 65 ವರ್ಷದ ವೃದ್ಧ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ 1971 ಸಕ್ರಿಯ ಪ್ರಕರಣಗಳಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.