ದಾವಣಗೆರೆ: ಜಿಲ್ಲೆಯಲ್ಲಿ 244 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ.
ದಾವಣಗೆರೆಯಲ್ಲಿ 133, ಹರಿಹರ 28, ಜಗಳೂರು 8, ಚನ್ನಗಿರಿ 39, ಹೊನ್ನಾಳಿ 32, ಹೊರ ಜಿಲ್ಲೆಯಿಂದ ಬಂದಿದ್ದ ನಾಲ್ವರಲ್ಲಿ ವೈರಾಣು ಇರುವುದು ಖಚಿತವಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 6,270ಕ್ಕೇರಿದೆ.
ಜಿಲ್ಲೆಯಲ್ಲಿ ಐದು ಮಂದಿ ಮೃತಪಟ್ಟಿದ್ದು, ಇದುವರೆಗೆ 141 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಜಿಲ್ಲೆಯಲ್ಲಿ ಇಂದು 381 ಮಂದಿ ಕೊರೊನಾದಿಂದ ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ 4,230 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 1,899 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದೆ.