ದಾವಣಗೆರೆ: ಜಿಲ್ಲೆಯಲ್ಲಿ ಇಂದು 257 ಜನರಿಗೆ ಕೊರೊನಾ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 14,097 ಕ್ಕೇರಿದೆ.
ಸದ್ಯ 3,136 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದೆ. ಇದರಲ್ಲಿ ಏಳು ಮಂದಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ರೋಗಿಗಳ ಆರೋಗ್ಯದ ಬಗ್ಗೆ ತೀವ್ರ ನಿಗಾ ವಹಿಸಲಾಗಿದೆ. ಈವರೆಗೆ 228 ಜನರು ಕೊರೊನಾಗೆ ಬಲಿಯಾಗಿದ್ದಾರೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ವೈದ್ಯಕೀಯ ಸಿಬ್ಬಂದಿ ಮುಷ್ಕರ ಕೈಗೊಂಡಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ ಎಂದು ಜಿಲ್ಲಾಧಿಕಾರಿ ಮೀಡಿಯಾ ಹೆಲ್ತ್ ಬುಲೆಟಿನ್ ವೇಳೆ ತಿಳಿಸಿದ್ದಾರೆ.