ETV Bharat / state

ಮಾಜಿ‌ ಸಚಿವರ ಫಾರ್ಮ್ ಹೌಸ್​ನಲ್ಲಿ ಪತ್ತೆಯಾಗಿದ್ದ 30 ವನ್ಯಜೀವಿಗಳ ಪೈಕಿ 2 ಪ್ರಾಣಿಗಳು ಸಾವು - ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯ

ಕಲ್ಲೇಶ್ವರ ಮಿಲ್ ಹಿಂಭಾಗದ ಫಾರ್ಮ್ ಹೌಸ್‌ನಲ್ಲಿ ಪತ್ತೆಯಾಗಿದ್ದ 30 ವನ್ಯಜೀವಿಗಳ ಪೈಕಿ ಸ್ಥಳ ಬದಲಾವಣೆಯಿಂದ 2 ಪ್ರಾಣಿಗಳು ಸಾವನ್ನಪ್ಪಿವೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ದೂರವಾಣಿ ಮೂಲಕ ಮಾಹಿತಿ ನೀಡಿದ್ದಾರೆ.

ndira Priyadarshini Mini Zoo
ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯ
author img

By

Published : Jan 23, 2023, 2:14 PM IST

ದಾವಣಗೆರೆ: ಮಾಜಿ ಸಚಿವರೊಬ್ಬರ ಕಲ್ಲೇಶ್ವರ ಮಿಲ್ ಹಿಂಭಾಗದ ಫಾರ್ಮ್ ಹೌಸ್‌ನಲ್ಲಿ ಪತ್ತೆಯಾಗಿದ್ದ ವನ್ಯಜೀವಿಗಳನ್ನು ಇತ್ತೀಚೆಗೆ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯಕ್ಕೆ ಬಿಡಲಾಗಿದೆ. ಇವುಗಳಲ್ಲಿ ಒಂದು ಕೃಷ್ಣಮೃಗ ಹಾಗೂ ಕಾಡು ಹಂದಿ ಸಾವನ್ನಪ್ಪಿವೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.‌ ಡಿಸೆಂಬರ್​ 21ರಂದು ಕಲ್ಲೇಶ್ವರ ಮಿಲ್ ಮೇಲೆ ದಾಳಿ‌ ನಡೆಸಿದ್ದ ಸಿಸಿಬಿ ಪೋಲಿಸರು, ಒಟ್ಟು 30 ವನ್ಯಜೀವಿಗಳನ್ನು ವಶಕ್ಕೆ ಪಡೆದು ಸ್ಥಳೀಯ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದರು. ಈ ಸಂಬಂಧ ಸಂಪಣ್ಣ, ಕರಿಬಸವಯ್ಯ, ಸೆಂಥಿಲ್ ಹಾಗೂ ಮಿಲ್​ನ ಮಾಲೀಕರಾದ ಮಾಜಿ ಸಚಿವರ ಮೇಲೆ ಪ್ರಕರಣ ದಾಖಲಿಸಲಾಗಿತ್ತು.

ನ್ಯಾಯಾಲಯದ ಆದೇಶದಂತೆ ಪ್ರಾಣಿಗಳು ವಶಕ್ಕೆ: ಮಿಲ್‌ನಲ್ಲಿ ಪತ್ತೆಯಾದ ಆರು ಕಾಡು ಹಂದಿಗಳನ್ನು ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ. ಇನ್ನುಳಿದ 22 ಕಾಡು ಪ್ರಾಣಿಗಳು ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ಸುರಕ್ಷಿತವಾಗಿವೆ. ಒಟ್ಟು 30 ವನ್ಯಜೀವಿಗಳನ್ನು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶದಂತೆ ಅರಣ್ಯ ಇಲಾಖೆ ಕಲ್ಲೇಶರ ಮಿಲ್ ಹಿಂಭಾಗದ ಫಾರ್ಮ್‌ಹೌಸ್‌ನಿಂದ ವಶಕ್ಕೆ ಪಡೆದು, ಕಿರು ಮೃಗಾಲಯಕ್ಕೆ ಸ್ಥಳಾಂತರಿಸಲಾಗಿತ್ತು. 11 ಕೃಷ್ಣಮೃಗ, 07 ಜಿಂಕೆ, 02 ನರಿ, 03 ಮುಂಗುಸಿ, 07 ಕಾಡು ಹಂದಿಗಳನ್ನು ಅರಣ್ಯ ಇಲಾಖೆಯ ನ್ಯಾಯಾಲಯದ ಆದೇಶದಂತೆ ವಶಕ್ಕೆ ಪಡೆದಿತ್ತು. ಈ ಪೈಕಿ ಈಗಾಗಲೇ ಮೃತಪಟ್ಟಿದ್ದ ಕಾಡು ಹಂದಿಯ ಕಳೇಬರವನ್ನು ಕೋರ್ಟ್ ಅದೇಶದಂತೆ ವಿಲೇವಾರಿ ಮಾಡಲಾಗಿದೆ. ಅಲ್ಲದೇ, ಸೋಮವಾರ ಒಂದು ಕೃಷ್ಣಮೃಗ ಸಾವನ್ನಪ್ಪಿದ್ದು, ಅದರ ದೇಹ ವಿಲೇವಾರಿಗಾಗಿ ನ್ಯಾಯಾಲಯಕ್ಕೆ ಅರಣ್ಯ ಇಲಾಖೆ ಅನುಮತಿ ಕೋರಿ ಅರ್ಜಿ ಸಲ್ಲಿಸಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಇದನ್ನೂ ಓದಿ: ವನ್ಯಜೀವಿ ಪತ್ತೆ ಪ್ರಕರಣ: ಮಾಜಿ ಸಚಿವರು ಸೇರಿ ಮೂವರಿಗೆ ನಿರೀಕ್ಷಣಾ ಜಾಮೀನು

ಕೋರ್ಟ್ ಹೇಳಿದ್ರೆ ಪ್ರಾಣಿಗಳನ್ನು ಬಿಡ್ತೇವೆ: ಇನ್ನುಳಿದಂತೆ ಇದೀಗ ಮೃತಪಟ್ಟಿರುವ ಒಂದು ಕೃಷ್ಣಮೃಗ ಹೊರತುಪಡಿಸಿ ಹತ್ತು ಕೃಷ್ಣಮೃಗ ಹಾಗೂ ಏಳು ಜಿಂಕೆಗಳನ್ನು ಅರಣ್ಯ ಪ್ರದೇಶಕ್ಕೆ ಬಿಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ. ಕೋರ್ಟ್ ಅನುಮತಿ ದೊರೆತರೆ ಅವುಗಳನ್ನು ಸಹ ಕಾಡಿಗೆ ಬಿಡಲಾಗುವುದು ಎಂದು ಇದೇ ವೇಳೆ ದೂರವಾಣಿ ಮೂಲಕ ಅಧಿಕಾರಿ ತಿಳಿಸಿದರು.

ಡಿಎಫ್ಒ ಜಗನ್ನಾಥ್ ಪ್ರತಿಕ್ರಿಯೆ: "ನ್ಯಾಯಾಲಯದ ಆದೇಶದಂತೆ ವನ್ಯ ಪ್ರಾಣಿಗಳನ್ನು ಕಿರು ಮೃಗಾಲಯದಲ್ಲಿ ಇರಿಸಲಾಗಿದೆ. ಕೋರ್ಟ್ ಅನುಮತಿ ನೀಡಿದ ಪ್ರಾಣಿಗಳನ್ನು ಕಾಡಿಗೆ ಬಿಡಲಾಗಿದೆ. ಇನ್ನುಳಿದ ಪ್ರಾಣಿಗಳನ್ನು ಅರಣ್ಯ ಪ್ರದೇಶಕ್ಕೆ ಬಿಡಲು ನಿರ್ದೇಶನ ನೀಡಿದ್ರೆ, ಅವುಗಳನ್ನು ಅರಣ್ಯ ಪ್ರದೇಶಕ್ಕೆ ಬಿಡುತ್ತೇವೆ" ಎಂದು ಡಿಎಫ್ಒ ಜಗನ್ನಾಥ್ ತಿಳಿಸಿದರು. ಆದ್ರೆ, ಅವರು ಮೃತಪಟ್ಟ 2 ಪ್ರಾಣಿಗಳ ಕುರಿತು ಮಾಹಿತಿ ನೀಡಲು ನಿರಾಕರಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.