ದಾವಣಗೆರೆ: ಜಿಲ್ಲೆಯಲ್ಲಿ ಹೊಸದಾಗಿ 317 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ.
ಕೋವಿಡ್ ಪ್ರಕರಣಗಳ ವಿವರ:
ಇಂದು ದಾವಣಗೆರೆಯಲ್ಲಿ 152, ಹರಿಹರ 40, ಜಗಳೂರು 15, ಚನ್ನಗಿರಿ 42, ಹೊನ್ನಾಳಿ 60 ಹಾಗೂ ಹೊರ ಜಿಲ್ಲೆಯಿಂದ ಬಂದಿದ್ದ 8 ಮಂದಿಯಲ್ಲಿ ಸೋಂಕಿರುವುದು ಖಚಿತವಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 8843ಕ್ಕೇರಿದೆ.
ಮೃತರು:
ದಾವಣಗೆರೆ ತಾಲೂಕಿನ ನಾಗನೂರು ಗ್ರಾಮದ 63 ವರ್ಷದ ವೃದ್ಧ ಹಾಗೂ ದೊಗಳ್ಳಿ ಗ್ರಾಮದ 70 ವರ್ಷದ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೆ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಮೂಲಕ ಸಾವನ್ನಪ್ಪಿದವರ ಸಂಖ್ಯೆ 181ಕ್ಕೆ ಏರಿಕೆಯಾಗಿದೆ.
ಗುಣಮುಖ:
ಜಿಲ್ಲೆಯಲ್ಲಿಂದು 228 ಮಂದಿ ಕೊರೊನಾ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ ಒಟ್ಟು 6464 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 2198 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ಮುಂದುವರಿದಿದೆ.