ಹರಿಹರ: ನಗರದ ಗೌಸಿಯಾ ಕಾಲೋನಿಯಲ್ಲಿ 4 ಜನರಿಗೆ ಸೋಂಕು ದೃಢಪಟ್ಟಿದ್ದು, ತಾಲೂಕಿನಲ್ಲಿ ಸೋಂಕಿತರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ.
ತಾಲೂಕಿನಲ್ಲಿ ಸೋಂಕಿತರ ಸಂಖ್ಯೆ 30ಕ್ಕೆ ಏರಿಕೆಯಾಗಿದ್ದು, ನಗರದಲ್ಲಿ ಅಂಗಡಿ ಮುಂಗಟ್ಟುಗಳನ್ನು ಮಧ್ಯಾಹ್ನದ ನಂತರ ಮುಚ್ಚಿಸಲಾಗುತ್ತಿದೆ.
ಈ ಹಿಂದೆ ಗೌಸಿಯಾ ಕಾಲೋನಿಯ 30 ವರ್ಷದ ವ್ಯಕ್ತಿಗೆ ಸೋಂಕು ದೃಢಪಟ್ಟಿತ್ತು. ಈ ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕಿತ ಸುಮಾರು 7 ಜನರ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಇಂದು ಬಂದ ವರದಿಯಲ್ಲಿ 65 ವರ್ಷದ ವೃದ್ಧ, 57 ವರ್ಷದ ಮಹಿಳೆ ಹಾಗೂ ಇಬ್ಬರು ಯುವಕರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ಈ ಕುಟುಂಬದ ಉಳಿದ ಮೂರು ಸದಸ್ಯರ ವರದಿ ನೆಗಟಿವ್ ಬಂದಿದ್ದು, ಹೋಂ ಕ್ವಾರಂಟೈನ್ನಲ್ಲಿದ್ದ ಸೋಂಕಿತರನ್ನು ಇಂದು ಮಧ್ಯಾಹ್ನ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. 22 ಜನರು ಗುಣಮುಖರಾಗಿ ತಮ್ಮ ಮನೆಗಳಿಗೆ ಮರಳಿದ್ದಾರೆ.