ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲೂಕಿನ ಬೇಲಿಮಲ್ಲೂರು ಗ್ರಾಮದ ಹೊಳೆಯಲ್ಲಿ ಎತ್ತಿನ ಗಾಡಿ ಜೊತೆಗೆ ಕೊಚ್ಚಿ ಹೋಗಿದ್ದ ರೈತನ ಮೃತದೇಹ ಪತ್ತೆಯಾಗಿದ್ದು, ಪತ್ನಿ, ಕುಟುಂಬಸ್ಥರ ನೋವಿನ ನಡುವೆಯೇ ಅಂತ್ಯಕ್ರಿಯೆ ನೆರೆವೇರಿತು.
ಸಿಎಂ ರಾಜಕೀಯ ಕಾರ್ಯದರ್ಶಿ ಎಂ. ಪಿ ರೇಣುಕಾಚಾರ್ಯ, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸೇರಿದಂತೆ ಬೇರೆ ಬೇರೆ ಇಲಾಖೆಯ ಅಧಿಕಾರಿಗಳು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇದೇ ವೇಳೆ ಮೃತನ ಕುಟುಂಬಸ್ಥರಿಗೆ 5 ಲಕ್ಷ ರೂಪಾಯಿ ಚೆಕ್ ಅನ್ನು ವಿತರಿಸಲಾಯಿತು.