ETV Bharat / state

ಮಳೆಯಿಂದ ಅಮರನಾಥ ಮಾರ್ಗ ಮಧ್ಯೆ ಗುಡ್ಡ ಕುಸಿತ: ಸಂಕಷ್ಟಕ್ಕೆ ಸಿಲುಕಿದ ಧಾರವಾಡದ ಐವರು ಗೆಳೆಯರು

ಅಮರನಾಥ ಯಾತ್ರೆಗೆ ತೆರಳುವ ಮಾರ್ಗಮಧ್ಯೆ ಭಾರಿ ಮಳೆಯಿಂದಾಗಿ ಗುಡ್ಡ ಕುಸಿತ ಉಂಟಾಗಿದ್ದು, ಪರಿಣಾಮ ಕರ್ನಾಟಕದ ಯಾತ್ರಾರ್ಥಿಗಳು ಮಾರ್ಗಮಧ್ಯೆ ಸಿಲುಕಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

pilgrims
ಸಂಕಷ್ಟಕ್ಕೆ ಸಿಲುಕಿದ ಧಾರವಾಡದ ಐವರು ಗೆಳೆಯರು
author img

By

Published : Jul 9, 2023, 1:16 PM IST

Updated : Jul 9, 2023, 6:22 PM IST

ಅಮರನಾಥ ಯಾತ್ರೆ ಕೈಗೊಂಡವರ ಕುರಿತು ಮಾಹಿತಿ ನೀಡಿದ ಮಹೇಶ್​

ಧಾರವಾಡ : ನಿರಂತರ ಮಳೆಯಾಗುತ್ತಿರುವ ಪರಿಣಾಮ ಜಮ್ಮು ಕಾಶ್ಮೀರದ ಅಮರನಾಥ ಮಾರ್ಗ ಮಧ್ಯೆ ಗುಡ್ಡ ಕುಸಿತ ಉಂಟಾಗಿದೆ. ಕಳೆದ ನಾಲ್ಕು ದಿನಗಳ ಹಿಂದಷ್ಟೇ ಯಾತ್ರೆ ಕೈಗೊಂಡಿದ್ದ ಧಾರವಾಡ ಮೂಲದ ಐವರು ಗೆಳೆಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸದ್ಯಕ್ಕೆ ಪಂಚತಾರ್ನಿ ಬಳಿ ಇರುವುದಾಗಿ ಮಾಹಿತಿ ನೀಡಿದ್ದಾರೆ.

ವಿಠ್ಠಲ ಬಾಚಗುಂಡಿ, ರಾಕೇಶ್​ ನಾಜರೆ, ಹರೀಶ ಸಾಳುಂಕೆ, ನಾಗರಾಜ ಹಳಕಟ್ಟಿ, ಮಡಿವಾಳಪ್ಪ ಕೊಟಬಾಗಿ ತೊಂದರೆಗೆ ಸಿಲುಕಿರುವ ಯುವಕರು. ನಮಗೆ ಊಟ, ವಸತಿ ಸಮಸ್ಯೆ ಎದುರಾಗಿದೆ. ಇಲ್ಲಿನ ಸ್ಥಳೀಯರು ಊಟಕ್ಕೆ ಹೆಚ್ಚಿನ ಹಣ ಕೇಳುತ್ತಿದ್ದಾರೆ. ನಮ್ಮ ಬಳಿ ಹಣವಿಲ್ಲ. ದಿನದಿಂದ ದಿನಕ್ಕೆ ಗುಡ್ಡಕುಸಿತ ಹೆಚ್ಚಾಗುತ್ತಿದೆ. ರಾಜ್ಯಕ್ಕೆ ಕರೆತಲು ಸರ್ಕಾರ ಮುಂದಾಗಬೇಕು ಎಂದು ಮನವಿ ಮಾಡಿಕೊಂಡಿದ್ದಾಗಿ ಯುವಕರ ಸಂಬಂಧಿ ಮಹೇಶ್​ ಎಂಬವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಕಾಶ್ಮೀರದ ಹಲವು ಭಾಗಗಳಲ್ಲಿ ಮಳೆಯಾಗುತ್ತಿದ್ದು, ಪ್ರತಿಕೂಲ ಹವಾಮಾನದಿಂದಾಗಿ ಬಾಲ್ಟಾಲ್ ಮತ್ತು ಪಹಲ್ಗಾಮ್ ಅವಳಿ ಮಾರ್ಗಗಳಲ್ಲಿ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಜುಲೈ 7ರಂದು ತಿಳಿಸಿದ್ದಾರೆ. ಪ್ರಕೃತಿಯ ಮುಂದೆ ಮನುಷ್ಯ ಅಸಹಾಯಕ, ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಯಾತ್ರಾರ್ಥಿಗಳ ಹಿತದೃಷ್ಟಿಯಿಂದ ಯಾತ್ರೆ ಸ್ಥಗಿತಗೊಳಿಸಿದ್ದೇವೆ. ಮತ್ತು ಯಾವುದೇ ಯಾತ್ರಿಕರಿಗೆ ಪವಿತ್ರ ಗುಹೆಯತ್ತ ತೆರಳಲು ಅನುಮತಿ ನೀಡುವುದಿಲ್ಲ ಎಂದು ಮಾಹಿತಿ ನೀಡಿದ್ದರು.

ಇದನ್ನೂ ಓದಿ : ಅಮರನಾಥ ಯಾತ್ರೆಯಲ್ಲಿ ಹವಾಮಾನ ವೈಪರೀತ್ಯ.. ಸಂಕಷ್ಟಕ್ಕೆ ಸಿಲುಕಿದ ಕನ್ನಡಿಗರು; ಅಗತ್ಯ ಕ್ರಮಕ್ಕೆ ಸಿಎಂ ಸೂಚನೆ

ಸಿಎಂ ಸಿದ್ದರಾಮಯ್ಯ ಸೂಚನೆ : ಪವಿತ್ರ ಅಮರನಾಥ ಯಾತ್ರೆಗೆ ತೆರಳಿ ಹವಾಮಾನ ವೈಪರೀತ್ಯದಿಂದ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರನ್ನು ರಕ್ಷಿಸಿ ಸುರಕ್ಷಿತವಾಗಿ ಮರಳಲು ಅಗತ್ಯವಾದ ಎಲ್ಲ ನೆರವನ್ನು ನೀಡುವಂತೆ ಮುಖ್ಯಮಂತ್ರಿಗಳು ತಮ್ಮ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಗದಗದಿಂದ ತೆರಳಿರುವ 23 ಮಂದಿ ಸೇರಿ ಒಟ್ಟು 80 ಮಂದಿ ಕನ್ನಡಿಗರು ಅಮರನಾಥ ಮಂದಿರದಿಂದ 6 ಕಿ.ಮೀ ದೂರದಲ್ಲಿರುವ ಪಂಚತಾರ್ನಿ ಟೆಂಟ್​​ನಲ್ಲಿ ಸಿಲುಕಿದ್ದಾರೆ ಎನ್ನುವ ಮಾಹಿತಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಅಗತ್ಯ ರಕ್ಷಣಾ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿನ್ನೆ ತಿಳಿಸಿದ್ದಾರೆ.

ಇದನ್ನೂ ಓದಿ : ಹವಾಮಾನ ವೈಪರೀತ್ಯದಿಂದ ಅಮರನಾಥ ಯಾತ್ರೆ ತಾತ್ಕಾಲಿಕವಾಗಿ ಸ್ಥಗಿತ

ಜುಲೈ 1ರಿಂದ ಆರಂಭವಾಗಿರುವ ಅಮರನಾಥ ಯಾತ್ರೆಯಲ್ಲಿ 67,566 ಯಾತ್ರಾರ್ಥಿಗಳು ಅಮರನಾಥ ಗುಹಾ ದೇವಾಲಯಕ್ಕೆ ಭೇಟಿ ನೀಡಿದ್ದಾರೆ ಎಂದು ಅಮರನಾಥ ದೇಗುಲ ಮಂಡಳಿ ಇತ್ತೀಚೆಗೆ ಮಾಹಿತಿ ನೀಡಿತ್ತು. 18,354 ಯಾತ್ರಿಕರು ಬಾಲ್ಟಾಲ್ ಬೇಸ್ ಕ್ಯಾಂಪ್ ಮತ್ತು ನುನ್ವಾನ್ ಬೇಸ್ ಕ್ಯಾಂಪ್‌ನಿಂದ ಅಮರನಾಥ ಗುಹೆ ದೇವಸ್ಥಾನಕ್ಕೆ ತೆರಳಿದ್ದರು. ಇವರಲ್ಲಿ 12,483 ಪುರುಷರು, 5,146 ಮಹಿಳೆಯರು, 457 ಮಕ್ಕಳು, 266 ಸಾಧುಗಳು ಹಾಗೂ 2 ಸಾಧ್ವಿಗಳು ಇದ್ದರು ಎಂದು ಅಧಿಕೃತ ಹೇಳಿಕೆಯಲ್ಲಿ ಮಾಹಿತಿ ನೀಡಿತ್ತು.

ಇದನ್ನೂ ಓದಿ : Amarnath Yatra 2023: ಅಮರನಾಥ ಯಾತ್ರೆ ಆರಂಭ... ಬಿಗಿ ಭದ್ರತೆಯಲ್ಲಿ ಯಾತ್ರೆಗೆ ಹೊರಟ ಮೊದಲ ಬ್ಯಾಚ್ - ವಿಡಿಯೋ

Last Updated : Jul 9, 2023, 6:22 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.