ETV Bharat / state

ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿಯಿಂದ 67 ಕೋಟಿ ರೂ. ಅನುದಾನಕ್ಕೆ ಪ್ರಸ್ತಾವನೆ - ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಎನ್. ಇ. ಜೀವನಮೂರ್ತಿ

ಬಯಲುಸೀಮೆ ಪ್ರದೇಶಗಳಲ್ಲಿ ಅಂತರ್ಜಲ ಹೆಚ್ಚಿಸುವ ಗುರಿ ಹೊಂದಿದ್ದೇವೆ. ಜತೆಗೆ ಕೃಷಿ ತತ್ಸಂಬಂಧಿತ ಚಟುವಟಿಕೆಗಳಾದ ತೋಟಗಾರಿಕೆ, ಅರಣ್ಯ, ಪಶು ಸಂಗೋಪನೆ, ಮಣ್ಣು ಮತ್ತು ನೀರು ಸಂರಕ್ಷಣಾ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಎನ್.ಇ.ಜೀವನಮೂರ್ತಿ ತಿಳಿಸಿದರು.

67  crore  proposal for  grant
ಪ್ರಗತಿ ಪರಿಶೀಲನಾ ಸಭೆ
author img

By

Published : Jan 20, 2021, 7:19 PM IST

ದಾವಣಗೆರೆ: ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ವ್ಯಾಪ್ತಿಯಲ್ಲಿ 1,724 ಕಾಮಗಾರಿಗಳು ಪ್ರಗತಿಯಲ್ಲಿವೆ. ಕಾಮಗಾರಿಗಳನ್ನು ಪೂರ್ಣಗೊಳಿಸಲು 67.67 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಎನ್.ಇ.ಜೀವನಮೂರ್ತಿ ಹೇಳಿದರು.

ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದಲ್ಲಿ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ವ್ಯಾಪ್ತಿಯ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಗೂ ಮುನ್ನ ಮಾತನಾಡಿದ ಅವರು, ಡಾ. ಬಿ.ಎಂ.ನಂಜುಂಡಪ್ಪ ವರದಿಯ ಆಧಾರ ಮೇಲೆ ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿಯು 1995ರಿಂದ ಜಾರಿಗೆ ಬಂದಿದೆ. ಕಡಿಮೆ ಮಳೆಯ ಕಾರಣ ಪದೇ ಪದೆ ಬರ ಪರಿಸ್ಥಿತಿ ಎದುರಿಸುವ ಪ್ರದೇಶಗಳಲ್ಲಿ ಅಭಿವೃದ್ಧಿ ಕಾರ್ಯ ಕೈಗೊಂಡು ಅಸಮತೋಲನ ನಿವಾರಣೆಗಾಗಿ ಮಂಡಳಿ ರಚನೆಯಾಗಿದೆ.

ಈ ಪ್ರದೇಶಗಳ ಕೃಷಿ ತತ್ಸಂಬಂಧಿತ ಚಟುವಟಿಕೆಗಳಾದ ತೋಟಗಾರಿಕೆ, ಅರಣ್ಯ, ಪಶು ಸಂಗೋಪನೆ, ಮಣ್ಣು ಮತ್ತು ನೀರು ಸಂರಕ್ಷಣಾ ಕಾಮಗಾರಿಗಳಿಗೆ, ಅದರಲ್ಲೂ ಪ್ರಮುಖವಾಗಿ ಈ ಭಾಗದ ವ್ಯಾಪ್ತಿಯಲ್ಲಿ ಅಂತರ್ಜಲ ಹೆಚ್ಚಳಕ್ಕೆ ಪ್ರಮುಖ ಆದ್ಯತೆ ನೀಡಲಾಗುತ್ತಿದೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.