ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕು ಆಸ್ಪತ್ರೆಯ ಮುಂಭಾಗ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ.
ಈ ಮೊದಲು ಎರಡು ಕುಟುಂಬಗಳು ಹೊನ್ನೆಬಾಗಿ ಗ್ರಾಮದಲ್ಲಿ ಹೊಡೆದಾಡಿಕೊಂಡಿದ್ದು, ಚಿಕಿತ್ಸೆಗಾಗಿ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದರು. ಇಲ್ಲಿಯೂ ಕೂಡ ಎರಡು ಕುಟುಂಬಗಳ ಮಧ್ಯೆ ಮಾತಿಗೆ ಮಾತು ಬೆಳೆದು ಮತ್ತೆ ಹೊಡೆದಾಡಿಕೊಂಡಿದ್ದಾರೆ. ಹೆಣ್ಣು ಮಕ್ಕಳು, ಮಕ್ಕಳು ಎಂದು ನೋಡದೆ ಕಲ್ಲು, ಚೇರ್ನಿಂದ ಹಲ್ಲೆ ನಡೆಸಲಾಗಿದ್ದು, ಎರಡು ಕುಟುಂಬಸ್ಥರ ಮೇಲೆ ಚನ್ನಗಿರಿ ಪೊಲೀಸರು ದೂರು ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಓದಿ : ಕರ್ನಾಟಕದಲ್ಲಿ ಕೊರೊನಾ ಸಾವಿನ "ಮನೆ": ಆಸ್ಪತ್ರೆಗೆ ಬರುವ ಮುನ್ನವೇ ಹಾರಿ ಹೋಗುತ್ತಿದೆ ಪ್ರಾಣಪಕ್ಷಿ!