ದಾವಣಗೆರೆ: ಅಪ್ರಾಪ್ತೆಯೊಬ್ಬಳ ಮೇಲೆ ಆಕೆಯ ಸಂಬಂಧಿಕನೇ ಅತ್ಯಾಚಾರ ಎಸಗಿರುವ ಆರೋಪ ಪ್ರಕರಣ ಜಿಲ್ಲೆಯ ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.
ಹುಲ್ಲು ತರಲು ಬಾಲಕಿಯನ್ನು ಕಾಡಿಗೆ ಕರೆದೊಯ್ದಿರುವ ಸಂಬಂಧಿಕ ಅತ್ಯಾಚಾರವೆಸಿಗಿದ್ದಾನೆಂದು ಆರೋಪಿಸಲಾಗಿದೆ. ಅಲ್ಲದೇ, ಈ ವಿಷಯವನ್ನು ಮನೆಯಲ್ಲಿ ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎನ್ನಲಾಗ್ತಿದೆ.
ಈ ನಡುವೆ ಬಾಲಕಿ ಅನಾರೋಗ್ಯದಿಂದ ಬಳಲಿದ ಕಾರಣ ಪೋಷಕರು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಬಾಲಕಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ಜಗಳೂರು ಪೊಲೀಸರು 23 ವರ್ಷದ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.