ದಾವಣಗೆರೆ: ಅಪ್ರಾಪ್ತನೋರ್ವ ಚಿಕ್ಕಪ್ಪನ ಮಗಳ ಮೇಲೆ ಅತ್ಯಾಚಾರ ಎಸಗಿದ್ದು, ಅಪ್ರಾಪ್ತೆ ಈಗ ಗರ್ಭಿಣಿಯಾಗಿರುವ ಘಟನೆ ಹೊನ್ನಾಳಿ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.
ಕೂಡು ಕುಟುಂಬದಲ್ಲಿ ವಾಸಿಸುತ್ತಿದ್ದ ಬಾಲಕ ಅತ್ಯಾಚಾರ ಎಸಗಿದ್ದ, ಇದೀಗ ಬಾಲಕಿ ಗರ್ಭಿಣಿಯಾಗಿದ್ದಾಳೆ. ಆಕೆಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಅಪ್ರಾಪ್ತನ ವಿರುದ್ಧ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.
ಇದನ್ನೂ ಓದಿ: ಮೊಬೈಲ್ನಲ್ಲಿ ಅಶ್ಲೀಲ ವಿಡಿಯೋ ನೋಡಿ 6ರ ಬಾಲಕಿ ಮೇಲೆ ಅತ್ಯಾಚಾರ ಎಸಗಿದ 12ರ ಬಾಲಕ!