ದಾವಣಗೆರೆ: ಜಿಲ್ಲೆಯಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.
ಬೆಳಗ್ಗೆಯಿಂದಲೇ ಎಸಿಬಿ ದಾಳಿ ಆರಂಭವಾಗಿದ್ದು, ಫ್ಯಾಕ್ಟರಿ ಮತ್ತು ಬಾಯ್ಲರ್ ಇಲಾಖೆಯ ಉಪ ನಿರ್ದೇಶಕ ಕೆ.ಎಂ. ಪ್ರಥಮ್ ಅವರ ಕಚೇರಿ ಮೇಲೆ ದಾಳಿ ಮಾಡಿದರು. ದಾವಣಗೆರೆ ಕಚೇರಿ ಹಾಗೂ ಬೆಂಗಳೂರಿನ ಸಂಜಯ ನಗರದ ಅವರ ಮನೆ ಮತ್ತು ಅವರ ತಾಯಿ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದರು.
ದಾವಣಗೆರೆ ಎಸಿಬಿ ಎಸ್ಪಿ ಜಯಪ್ರಕಾಶ್ ನೇತೃತ್ವದಲ್ಲಿ ಏಕಕಾಲಕ್ಕೆ ಮೂರು ಕಡೆ ದಾಳಿ ನಡೆಸಿ ಅಧಿಕಾರಿಗಳು ಕಚೇರಿಯಲ್ಲಿ ಕಡತ ಪರಿಶೀಲನೆ ಮಾಡಿದರು. ದಾವಣಗೆರೆ ನಗರದ ಪಿಬಿ ರಸ್ತೆಯ ಹಳೇ ಅಪೂರ್ವ ಹೋಟೆಲ್ ಹಿಂಭಾಗ ಇರುವ ಫ್ಯಾಕ್ಟರಿ ಮತ್ತು ಬಾಯ್ಲರ್ ಇಲಾಖೆಯ ಮೇಲೂ ದಾಳಿ ನಡೆಸಿ ಕಡತ ಪರಿಶೀಲನೆ ನಡೆಸಿದರು.
ಇದನ್ನೂ ಓದಿ:ತಮಿಳುನಾಡು ಪಟಾಕಿ ಕಾರ್ಖಾನೆ ದುರಂತ: ಮೃತರ ಸಂಖ್ಯೆ 25ಕ್ಕೆ ಏರಿಕೆ