ದಾವಣಗೆರೆ: ಇ-ಸ್ವತ್ತು ನೀಡಲು ಎರಡು ಸಾವಿರ ರೂಪಾಯಿ ಲಂಚ ಪಡೆಯುವಾಗ ಗ್ರಾಮ ಪಂಚಾಯಿತಿ ಪಿಡಿಒ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಹನುಮಂತಪ್ಪ ಎಸಿಬಿ ಬಲೆಗೆ ಬಿದ್ದ ಪಿಡಿಒ. ಚನ್ನಗಿರಿ ತಾಲೂಕಿನ ಮಾವಿನಕಟ್ಟೆ ಗ್ರಾಮದ ರಂಗನಾಥ್ ಎಂಬುವವರಿಗೆ ಇ-ಸ್ವತ್ತು ಕೊಡಲು ಸತಾಯಿಸುತ್ತಿದ್ದ ಪಿಡಿಒ, ಎರಡು ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಎಸಿಬಿ ಡಿವೈಎಸ್ಪಿ ಪರಮೇಶ್ವರಪ್ಪ ನೇತೃತ್ವದ ತಂಡ ದಾಳಿ ನಡೆಸಿ ಹನುಮಂತಪ್ಪನನ್ನು ಬಂಧಿಸಿದೆ.