ಹರಿಹರ(ದಾವಣಗೆರೆ): ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಬೈಕ್ ಸವಾರ ಮೃತಪಟ್ಟಿದ್ದು, ಇನ್ನೊಬ್ಬನ ಸ್ಥಿತಿ ಗಂಭೀರವಾಗಿದೆ.
ನಗರದ ಹೊರವಲಯದ ಬೈಪಾಸ್ ಬಳಿಯ ಹರಿಹರ - ಶಿವಮೊಗ್ಗ ರಸ್ತೆಯಲ್ಲಿ ಮಧ್ಯಾಹ್ನ ಸುಮಾರು 3 ಗಂಟೆಯ ವೇಳೆಗೆ ಅಪಘಾತ ಸಂಭವಿಸಿದೆ. ತಲೆಗೆ ತೀವ್ರ ಪೆಟ್ಟು ಬಿದ್ದ ಪರಿಣಾಮ ಕಮಲಾಪುರ ಗ್ರಾಮದ ಮಲ್ಲೇಶ್ (25) ಎಂಬುವವರು ಮೃತಪಟ್ಟಿದ್ದಾರೆ.
ಇನ್ನೊಬ್ಬ ವ್ಯಕ್ತಿ ವಿದ್ಯಾನಗರ ನಿವಾಸಿಯಾದ ಅಲಿರಾಜ್ ಅನ್ಸಾರಿ ಎಂದು ತಿಳಿದು ಬಂದಿದೆ. ನಗರದ ಹೊರ ಭಾಗದಲ್ಲಿರುವ ಖಾಸಗಿ ಕಾರ್ಖಾನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ. ಈತನ ತಲೆ ಹಾಗೂ ಕೈ ಕಾಲುಗಳಿಗೆ ತೀವ್ರವಾದ ಗಾಯಗಳಾಗಿದ್ದು, ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಗ್ರಾಮಾಂತರ ಪಿಎಸ್‌ಐ ಡಿ. ರವಿಕುಮಾರ್ ಭೇಟಿ ನೀಡಿ, ಸ್ಥಳ ಪರಿಶೀಲಿಸಿ ದೂರು ದಾಖಲಿಸಿಕೊಂಡಿದ್ದಾರೆ.