ದಾವಣಗೆರೆ: ಗೂಡ್ಸ್ ಆಟೋಗೆ ಶಾಲಾ ವಾಹನ ಡಿಕ್ಕಿಯಾಗಿ ಆಟೋದಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದ ಹೊರವಲಯದ ಉದಘಟ್ಟ ಕ್ರಾಸ್ ಬಳಿ ನಡೆದಿದೆ.
ಎದುರಿಗೆ ಬಂದ ಆಟೋಗೆ ಶಾಲಾ ವಾಹನ ಡಿಕ್ಕಿ ಹೊಡೆದಿದೆ. ಜಗಳೂರಿನ ಹೈಟೆಕ್ ಶಾಲೆಗೆ ಸೇರಿದ ವಾಹನ ಇದಾಗಿದ್ದು, ಅದೃಷ್ಟವಶಾತ್ ಶಾಲಾ ಮಕ್ಕಳಿಗೆ ಯಾವುದೇ ತೊಂದರೆ ಆಗಿಲ್ಲ, ಆಟೋದಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಬಗ್ಗೆ ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.