ದಾವಣಗೆರೆ : ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ಮೆಕ್ಕೆಜೋಳ ಸುಟ್ಟು ಭಸ್ಮವಾಗಿರುವ ಘಟನೆ ತಾಲೂಕಿನ ಐಗೂರು ಗ್ರಾಮದಲ್ಲಿ ನಡೆದಿದೆ.
![destroyed millions of rupees worth of maize](https://etvbharatimages.akamaized.net/etvbharat/prod-images/6775748_502_6775748_1586774790405.png)
ಈ ವೇಳೆ ಬೈರತಿ ಬಸವರಾಜ್, ಮೆಕ್ಕೆಜೋಳಕ್ಕೆ ಬೆಂಕಿ ತಗುಲಿ ಹಾನಿಗೊಳಗಾದ ರೈತನಿಗೆ ವೈಯಕ್ತಿಕವಾಗಿ ₹50,000 ನೀಡಿದರು. ಬಳಿಕ ಮಾತನಾಡಿದ ಅವರು, ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ಅವಕಾಶ ನೀಡುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪರ ಅವರಲ್ಲಿ ಮನವಿ ಮಾಡುತ್ತೇನೆ ಎಂದರು. ಇದಕ್ಕೂ ಮುನ್ನ ಕೊರೊನಾ ಸೋಂಕು ತಡೆಗಟ್ಟುವಲ್ಲಿ ಹಗಲಿರುಳು ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಧನ್ಯವಾದ ತಿಳಿಸಿದ ಸಚಿವರು, ಏನೇ ಸಮಸ್ಯೆ ಇದ್ದರೆ ಗಮನಕ್ಕೆ ತನ್ನಿ ಎಂದರು.