ETV Bharat / state

ಪ್ರಚೋದನಾಕಾರಿ ಹೇಳಿಕೆ ಆರೋಪ : ಗೃಹ ಸಚಿವ ಮತ್ತು ಸಿಟಿ ರವಿ ವಿರುದ್ಧ ಕಾಂಗ್ರೆಸ್​ನಿಂದ ದೂರು - ಕೆಪಿಸಿಸಿ ವಕ್ತಾರ ಡಿ. ಬಸವರಾಜ ನೇತೃತ್ವದ ತಂಡ ದಾವಣಗೆರೆ ನಗರದ ಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು

ದೇಶದಲ್ಲಿ ಕರ್ನಾಟಕ ಪೊಲೀಸರಿಗೆ ಒಳ್ಳೆಯ ಹೆಸರಿದೆ. ಬೆಂಗಳೂರಿನಲ್ಲಿ ಬೈಕ್ ಅಪಘಾತ ವಿಚಾರವಾಗಿ ನಡೆದ ಕೊಲೆಯ ಪ್ರಕರಣದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಆದ್ರೆ, ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಶಾಸಕ ಸಿ.ಟಿ. ರವಿ ಅವರು ಭಾಷೆಯ ಹೆಸರಿನಲ್ಲಿ ಹೇಳಿಕೆ ನೀಡಿ, ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವ ಕೆಲಸ ಮಾಡಿದ್ದಾರೆ..

KPCC spokesman D. A Basavaraja led team lodged a complaint
ಗೃಹ ಸಚಿವ ಮತ್ತು ಸಿಟಿ ರವಿ ವಿರುದ್ಧ ಕಾಂಗ್ರೆಸ್​ನಿಂದ ದೂರು
author img

By

Published : Apr 10, 2022, 7:21 PM IST

ದಾವಣಗೆರೆ : ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಬಿಜೆಪಿ ಶಾಸಕ ಸಿ.ಟಿ. ರವಿ ವಿರುದ್ಧ ಕಾಂಗ್ರೆಸ್​ನಿಂದ ದೂರು ನೀಡಲಾಗಿದೆ. ಪ್ರಸ್ತುತ ನಡೆಯುತ್ತಿರುವ ಹಿಂದೂಯೇತರ ಧರ್ಮದ ಬೆಳವಣಿಗೆ ಮತ್ತು ಪ್ರಚೋದನಾಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ದೂರು ನೀಡಲಾಗಿದೆ. ಕೆಪಿಸಿಸಿ ವಕ್ತಾರ ಡಿ. ಬಸವರಾಜ ನೇತೃತ್ವದ ತಂಡ ದಾವಣಗೆರೆ ನಗರದ ಬಡಾವಣೆ ಪೊಲೀಸ್ ಠಾಣೆಗೆ ತೆರಳಿ, ದೂರು ನೀಡಿದೆ.

ಗೃಹ ಸಚಿವ ಮತ್ತು ಸಿಟಿ ರವಿ ವಿರುದ್ಧ ಕಾಂಗ್ರೆಸ್​ನಿಂದ ದೂರು

ದೇಶದಲ್ಲಿ ಕರ್ನಾಟಕ ಪೊಲೀಸರಿಗೆ ಒಳ್ಳೆಯ ಹೆಸರಿದೆ. ಬೆಂಗಳೂರಿನಲ್ಲಿ ಬೈಕ್ ಅಪಘಾತ ವಿಚಾರವಾಗಿ ನಡೆದ ಕೊಲೆಯ ಪ್ರಕರಣದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಆದ್ರೆ, ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಶಾಸಕ ಸಿ.ಟಿ. ರವಿ ಅವರು ಭಾಷೆಯ ಹೆಸರಿನಲ್ಲಿ ಹೇಳಿಕೆ ನೀಡಿ, ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ: ಐಎಸ್ಐ ಆಸ್ಪತ್ರೆಗಳ ಮೇಲ್ದರ್ಜೆ : ಚಿಕಿತ್ಸಾಲಯಗಳ ಅನುಮೋದನೆಗೆ ಶಿವರಾಮ್ ಹೆಬ್ಬಾರ್ ಮನವಿ

ಇವರಿಬ್ಬರ ವಿರುದ್ಧ ಎಫ್​ಐಆರ್ ದಾಖಲು ಮಾಡುವಂತೆ ಆಗ್ರಹಿಸಿ ಪೊಲೀಸರಿಗೆ ಲಿಖಿತ ದೂರನ್ನು ಕಾಂಗ್ರೆಸ್ ಮುಖಂಡರು ಸಲ್ಲಿಸಿದ್ದಾರೆ. ಅನಗತ್ಯವಾಗಿ ಪ್ರಚೋದಕಾರಿಯಾಗಿ ಹೇಳಿಕೆಗಳನ್ನು ನೀಡಲಾಗುತ್ತಿದೆ. ಇದು ಅಪಾಯಕಾರಿ ಆಗಿದೆ, ತಕ್ಷಣ ಇಬ್ಬರ ವಿರುದ್ಧ ಕ್ರಮವನ್ನು ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.