ದಾವಣಗೆರೆ : ರಾಜಸ್ಥಾನದ ಉದಯಪುರದಲ್ಲಿ ನಡೆದ ಕೊಲೆ ಪ್ರಕರಣ ಸಂಬಂಧ ಪರ ಅಥವಾ ವಿರೋಧವಾಗಿ ಯಾರೇ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳನ್ನು ಹಾಕಿದರೆ ಅಂತವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ ಬಿ ರಿಷ್ಯಂತ್ ಹೇಳಿದ್ದಾರೆ.
ಉದಯಪುರ ಘಟೆನೆ ಸಂಬಂಧ ಈಗಾಗಲೇ ದಾವಣಗೆರೆ ಪೊಲೀಸರಿಂದ ಸೂಕ್ಷ್ಮ, ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಪ್ಯಾಟ್ರೋಲಿಂಗ್ ನಡೆಸಲಾಗುತ್ತಿದೆ. ಇದರಿಂದ ಯಾವುದೇ ಸಮಸ್ಯೆ ಉಂಟಾಗಿಲ್ಲ. ಜಿಲ್ಲೆಯು ಶಾಂತಿಯುತವಾಗಿದೆ. ಜಿಲ್ಲೆಯಲ್ಲಿ ಯಾವುದೇ ಸೂಕ್ಷ್ಮ ವಿಚಾರಗಳಿದ್ರೆ ಪೊಲೀಸ್ ಇಲಾಖೆ ಗಮನಕ್ಕೆ ತರಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಯಾವುದೇ ಕಾರಣಕ್ಕೂ ಜನ ಕಾನೂನು ಕೈಗೆ ತೆಗೆದುಕೊಳ್ಳಬಾರದು. ಕಾನೂನು ಕೈಗೆ ತೆಗೆದುಕೊಂಡರೆ ನಾವು ಯಾರನ್ನು ಸುಮ್ಮನೆ ಬಿಡುವುದಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಟ್ಸ್ಆ್ಯಪ್, ಫೇಸ್ಬುಕ್ಗಳಲ್ಲಿ ಪರ-ವಿರೋಧವಾಗಿ ಸಂದೇಶ ಹಾಕಿದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರಗಿಸುತ್ತೇವೆ ಎಂದು ಎಚ್ಚರಿಸಿದರು.
ಇದನ್ನೂ ಓದಿ : ಉದಯಪುರದಲ್ಲಿ ನಡೆದ ಘಟನೆ ನಾಚಿಕೆಗೇಡಿನ ಹೇಯ ಕೃತ್ಯ : ಸಚಿವ ವಿ.ಸೋಮಣ್ಣ