ETV Bharat / state

ವಿಷ್ಣುವರ್ಧನ್ ಕಟ್ಟಾ ಅಭಿಮಾನಿ ಆತ್ಮಹತ್ಯೆಗೆ ಶರಣು - ವಿಷ್ಣುವರ್ಧನ್ ಅಭಿಮಾನಿ ಆತ್ಮಹತ್ಯೆ

ಸಾಹಸ ಸಿಂಹ ವಿಷ್ಣುವರ್ಧನ್​ ಅವರ ಅಭಿಮಾನಿವೋರ್ವರು ಸಾಲ ಬಾಧೆಯಿಂದ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

Actor Vishnuvardhan follower  suicide
Actor Vishnuvardhan follower suicide
author img

By

Published : Aug 28, 2020, 3:02 PM IST

ದಾವಣಗೆರೆ: ಸಾಲ ಬಾಧೆ ಹಿನ್ನೆಲೆಯಲ್ಲಿ ಅಭಿನವ ಭಾರ್ಗವ ಡಾ. ವಿಷ್ಣುವರ್ಧನ್ ಅವರ ಅಭಿಮಾನಿಯಾದ ಲೋಕೇಶ್‌ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಇವರು ನೇಣು ಬಿಗಿದುಕೊಂಡಿದ್ದಾರೆ. ಈ ಘಟನೆ ದಾವಣಗೆರೆಯ ಭಗತ್ ಸಿಂಗ್ ನಗರದಲ್ಲಿ ನಡೆದಿದೆ. ಭರತ್ ಡಾಬಾದ ಪಕ್ಕದಲ್ಲಿ ಬೀಡಾ ಸ್ಟಾಲ್ ನಡೆಸುತ್ತಿದ್ದ ಲೋಕೇಶ್ ಸಾಲದ ಸುಳಿಯಲ್ಲಿ ಸಿಲುಕಿದ್ದರು ಎಂಬ ಮಾಹಿತಿ ದೊರೆತಿದೆ.

Actor Vishnuvardhan follower  suicide
ಡಾ. ವಿಷ್ಣುವರ್ಧನ್ ಅಭಿಮಾನಿ ಆತ್ಮಹತ್ಯೆಗೆ ಶರಣು

ಪ್ರತಿ ವರ್ಷವೂ ತಮ್ಮ ಆರಾಧ್ಯದೈವ ವಿಷ್ಣುವರ್ಧನ್‌ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸುವ ಮೂಲಕ ಮನೆಮಾತಾಗಿದ್ದರು. ಇದರ ಜತೆಗೆ ಅವರ ಸಿನಿಮಾ ಬಿಡುಗಡೆಯಾದಾಗ ಅದ್ಧೂರಿಯಾಗಿ ಸ್ವಾಗತಿಸುತ್ತಿದ್ದರು.

ವಿಷ್ಣುವರ್ಧನ್ ಬದುಕಿದ್ದಾಗ ಲೋಕೇಶ್ ಅವರನ್ನು ಆತ್ಮೀಯವಾಗಿ ಮಾತನಾಡಿಸುತ್ತಿದ್ದಷ್ಟು ಸಲುಗೆ ಬೆಳೆಸಿಕೊಂಡಿದ್ದರು. ಲೋಕೇಶ್ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಅನೇಕರು ಸಂತಾಪ ಸೂಚಿಸಿದ್ದಾರೆ. ಕೆಟಿಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.‌

ETV Bharat Logo

Copyright © 2025 Ushodaya Enterprises Pvt. Ltd., All Rights Reserved.