ETV Bharat / state

ಕೆಎಸ್‍ಒಯು ಟೆಕ್ನಾಲಜಿ ಪಾರ್ಕ್ ಆಫ್ ಇಂಡಿಯಾದೊಂದಿಗೆ ಒಪ್ಪಂದ - ದಾವಣಗೆರೆ ಲೇಟೆಸ್ಟ್​ ನ್ಯೂಸ್

ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮತ್ತು ಭಾರತ ಸರ್ಕಾರದ ಎಲೆಕ್ಟ್ರಾನಿಕ್ಸ್ ಹಾಗೂ ಮಾಹಿತಿ ತಂತ್ರಜ್ಞಾನ ವಿಭಾಗದ ಸಾಫ್ಟ್​ವೇರ್ ಟೆಕ್ನಾಲಜಿ ಪಾರ್ಕ್ ಆಫ್ ಇಂಡಿಯಾ ನಡುವೆ ಪರಸ್ಪರ ತಿಳುವಳಿಕೆ ಪತ್ರಕ್ಕೆ ಒಪ್ಪಂದ ಮಾಡಿಕೊಳ್ಳಲಾಗಿದೆ.

ಕೆಎಸ್‍ಒಯು ಟೆಕ್ನಾಲಜಿ ಪಾರ್ಕ್ ಆಫ್ ಇಂಡಿಯಾದೊಂದಿಗೆ ಒಪ್ಪಂದ
Agreement with KSOU Technology Park of India
author img

By

Published : Jan 16, 2021, 2:21 PM IST

ದಾವಣಗೆರೆ: ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮತ್ತು ಭಾರತ ಸರ್ಕಾರದ ಎಲೆಕ್ಟ್ರಾನಿಕ್ಸ್ ಹಾಗೂ ಮಾಹಿತಿ ತಂತ್ರಜ್ಞಾನ ವಿಭಾಗದ ಸಾಫ್ಟ್​ವೇರ್ ಟೆಕ್ನಾಲಜಿ ಪಾರ್ಕ್ ಆಫ್ ಇಂಡಿಯಾ ನಡುವೆ ಪರಸ್ಪರ ತಿಳುವಳಿಕೆ ಪತ್ರಕ್ಕೆ ಒಪ್ಪಂದ ಮಾಡಿಕೊಳ್ಳಲಾಗಿದೆ.

ಇಲ್ಲಿನ ಕ.ರಾ.ಮು.ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರದಲ್ಲಿನ ಕಟ್ಟಡದಲ್ಲಿ 10,000 ಚದರ್​ ಅಡಿ ವಿಸ್ತೀರ್ಣವನ್ನು ಈ ಉದ್ದೇಶಕ್ಕೆ ನೀಡಲಾಗಿದ್ದು, ಭಾರತ ಸರ್ಕಾರದ ಯೋಜನೆಯನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಪಡೆದುಕೊಂಡಿದೆ. ಈ ಯೋಜನೆಯಡಿ ಐಟಿ, ಎಲೆಕ್ಟ್ರಾನಿಕ್ ಉದ್ಯಮಕ್ಕೆ ಪೂರಕವಾದ ಚಟುವಟಿಕೆಗಳನ್ನು ನಡೆಸುತ್ತದೆ. ಇದರಿಂದ ಭವಿಷ್ಯದಲ್ಲಿ ಕ.ರಾ.ಮು.ವಿವಿಯ ವಿದ್ಯಾರ್ಥಿ ಸಮೂಹಕ್ಕೆ ಮಾಹಿತಿ ತಂತ್ರಜ್ಞಾನ ವಿಷಯದಲ್ಲಿ ಹೆಚ್ಚಿನ ಬೆಂಬಲ ಹಾಗೂ ಸೇವೆ ದೊರೆಯಲಿದೆ.

ದಾವಣಗೆರೆ ಪ್ರಾದೇಶಿಕ ಕೇಂದ್ರವನ್ನು ವಿಶ್ವವಿದ್ಯಾನಿಲಯವು ಒದಗಿಸಿದ್ದು, ವಿಶ್ವವಿದ್ಯಾನಿಲಯದ ಕೋರ್ಸ್​​​ಗಳು, ಕೈಗಾರಿಕಾ ಅಗತ್ಯತೆಗಳು ಹಾಗೂ ಉದ್ಯಮದ ಅವಶ್ಯಕತೆಗಳಿಗೆ ಅನುಕೂಲವಾಗುವಂತೆ ಪಠ್ಯಕ್ರಮ ರಚನೆಗೆ ಸೌಲಭ್ಯಗಳು ಸೃಷ್ಟಿಯಾದಾಗ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಕ್ಕೆ ಒಟ್ಟಾರೆಯಾಗಿ ನೆರವಾಗಲಿದೆ. ರಾಷ್ಟ್ರೀಯ ಶಿಕ್ಷಣ ನೀತಿ 2020ರ ಆಶಯದಂತೆ ವಿಶ್ವವಿದ್ಯಾನಿಲಯವು ತನ್ನ ಕೋರ್ಸ್​​ಗಳ ಮುಖಾಂತರ ಕೈಗಾರಿಕೆ ಮತ್ತು ಉದ್ಯಮಗಳ ಜೊತೆ ಸಮೀಕರಿಸಿಕೊಳ್ಳಲು ನೆರವಾಗಲಿದೆ. ಅಲ್ಲದೆ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಿಗೆ, ಅಧ್ಯಾಪಕ ಮತ್ತು ಸಿಬ್ಬಂದಿ ವರ್ಗದವರಿಗೆ ಹಾಗೂ ಶೈಕ್ಷಣಿಕ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಮಾಹಿತಿ ತಂತ್ರಜ್ಞಾನದ ಒತ್ತಾಸೆ ಪಡೆಯುವಲ್ಲಿ ಈ ಒಪ್ಪಂದ ಸಹಕಾರಿಯಾಗಿದೆ.

ವಿಶ್ವವಿದ್ಯಾನಿಲಯವು ತನ್ನ ಎಲ್ಲಾ ವಿದ್ಯಾರ್ಥಿಗಳ ಒಳಿತಿಗಾಗಿ ಹಾಗೂ ಭವಿಷ್ಯದ ದೃಷ್ಟಿಯಿಂದ ಈ ಒಪ್ಪಂದವನ್ನು ಮಾಡಿಕೊಂಡಿದೆ. ದಾವಣಗೆರೆ ಸಂಸದ ಜಿ.ಎಂ. ಸಿದ್ದೇಶ್ವರ್‍ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಸ್. ವಿದ್ಯಾಶಂಕರ್ ಹಾಗೂ ಎಸ್​​ಟಿಪಿಐ ನಿರ್ದೇಶಕರಾದ ಶೈಲೇಂದ್ರ ಕುಮಾರ್ ತ್ಯಾಗಿಯವರ ಒತ್ತಾಸೆಯೊಂದಿಗೆ ಈ ಕಾರ್ಯಕ್ರಮ ಜಾರಿಯಾಗುತ್ತಿದೆ. ಎಸ್​​ಟಿಪಿಐ ಕರ್ನಾಟಕದಲ್ಲಿ ಸ್ಥಾಪಿಸುತ್ತಿರುವ ಕೇಂದ್ರದಲ್ಲಿ ಇದು 5ನೇ ಕೇಂದ್ರವಾಗಿದೆ.

ಈ ಒಡಬಂಡಿಕೆ ಕಾರ್ಯಕ್ರಮದಲ್ಲಿ ಕುಲಪತಿ ಡಾ.ಎಸ್. ವಿದ್ಯಾಶಂಕರ್, ಹಣಕಾಸು ಅಧಿಕಾರಿ ಡಾ.ಖಾದರ್​ ಪಾಷ, ಡೀನ್‍ರಾದ (ಶೈಕ್ಷಣಿಕ) ಡಾ. ಕಾಂಬ್ಳೆ ಅಶೋಕ್, ಪರೀಕ್ಷಾಂಗ ಕುಲಸಚಿವ ಡಾ. ಕವಿತಾ ರೈ, ಡೀನ್ (ಅಧ್ಯಯನ ಕೇಂದ್ರ) ರಾದ ಡಾ. ಷಣ್ಮುಖ, ಐಟಿ ಹಾಗೂ ಕಂಪ್ಯೂಟರ್ ವಿಭಾಗಗಳ ಮುಖ್ಯಸ್ಥರಾದ ಡಾ.ಬಿ.ಎಸ್.ರಶ್ಮಿ, ಡಾ. ಸುನಿತಾ, ಎಸ್​​ಟಿಪಿಐ ಅಧಿಕಾರಿಗಳಾದ ಜಯಪ್ರಕಾಶ್, ಕರಾಮುವಿಯ ಅಭಿಯಂತರ ಭಾಸ್ಕರ್ ಹಾಜರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.