ETV Bharat / state

ದಾವಣಗೆರೆ: ವಿದ್ಯಾರ್ಥಿಗಳನ್ನು ಸ್ವಾಗತಿಸಲು ಸಜ್ಜಾದ ಶಾಲಾ - ಕಾಲೇಜುಗಳು

ಇಂದಿನಿಂದ ದಾವಣಗೆರೆಯಲ್ಲಿ ಶಾಲಾ - ಕಾಲೇಜುಗಳು ಆರಂಭವಾಗಿದ್ದು, ತರಗತಿಗಳ ಆರಂಭಕ್ಕೆ ಸಕಲ ಸಿದ್ಧತೆ ಮಾಡಲಾಗಿದೆ.

ALL SET TO WELCOME SSLC PLUS TWO STUDENTS in Davanagere
ವಿದ್ಯಾರ್ಥಿಗಳನ್ನು ಸ್ವಾಗತಿಸಲು ಸಜ್ಜಾದ ಶಾಲಾ-ಕಾಲೇಜುಗಳು
author img

By

Published : Jan 1, 2021, 10:35 AM IST

ದಾವಣಗೆರೆ: ಕೊರೊನಾ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಶಾಲಾ - ಕಾಲೇಜುಗಳು ಇಂದಿನಿಂದ ಆರಂಭವಾಗಿದ್ದು, ಉತ್ಸಾಹದಿಂದಲೇ ವಿದ್ಯಾರ್ಥಿಗಳು ತರಗತಿಗಳಿಗೆ ಆಗಮಿಸುತ್ತಿದ್ದಾರೆ.

ವಿದ್ಯಾರ್ಥಿಗಳನ್ನು ಸ್ವಾಗತಿಸಲು ಸಜ್ಜಾದ ಶಾಲಾ-ಕಾಲೇಜುಗಳು

ಜಿಲ್ಲೆಯಲ್ಲಿ 1,550 ಶಾಲೆಗಳು ಹಾಗೂ 146 ಪಿಯು ಕಾಲೇಜುಗಳಲ್ಲಿ ತರಗತಿಗಳ ಆರಂಭಕ್ಕೆ ಸಕಲ ಸಿದ್ಧತೆ ಮಾಡಲಾಗಿದೆ. ರಾಜ್ಯ ಸರ್ಕಾರದ ಕೋವಿಡ್ ಮಾರ್ಗಸೂಚಿ ಅನ್ವಯ ತರಗತಿಗಳನ್ನು ಆರಂಭಿಸಲಾಗಿದೆ.

ಇದನ್ನೂ ಓದಿ: ಎಸ್‌ಎಸ್‌ಎಲ್‌ಸಿ, ಪ್ಲಸ್ ಟು ವಿದ್ಯಾರ್ಥಿಗಳನ್ನು ಸ್ವಾಗತಿಸಲು ಕೇರಳ ಶಾಲೆಗಳು ಸಜ್ಜು

ಸಾಮಾಜಿಕ ಅಂತರ, ಸ್ಯಾನಿಟೈಸರ್, ಥರ್ಮಲ್‌ ಸ್ಕ್ಯಾನರ್, ಮಾಸ್ಕ್ ಧರಿಸುವುದು ಸೇರಿದಂತೆ ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಹಾಗೂ ಅಧ್ಯಾಪಕರಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿದೆ. ವಿದ್ಯಾರ್ಥಿಗಳ ಆರೋಗ್ಯದಲ್ಲಿ ವ್ಯತ್ಯಯ ಕಂಡು ಬಂದರೆ ತಕ್ಷಣ ಐಸೋಲೇಷನ್ ಕೊಠಡಿಯಲ್ಲಿರಿಸಲು ಎಲ್ಲ ರೀತಿಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.