ದಾವಣಗೆರೆ: ಜಿಲ್ಲೆಯಲ್ಲಿ ಇಂದು ಮತ್ತೊಬ್ಬ ಪೊಲೀಸ್ ಕಾನ್ರಸ್ಟೇಬಲ್ಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಕೋವಿಡ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರತವಾಗಿದ್ದ ಹಿನ್ನೆಲೆಯಲ್ಲಿ ಸೋಂಕು ಬಂದಿದೆ. ಮೊನ್ನೆ ಗಂಟಲು ದ್ರವ ಸಂಗ್ರಹ ಮಾಡಲಾಗಿತ್ತು. ಇಂದು ಬಂದ ವರದಿಯಲ್ಲಿ ಪಾಸಿಟಿವ್ ಇರುವುದು ತಿಳಿದುಬಂದಿದೆ.
ಕೆಲವು ದಿನಗಳ ಹಿಂದೆ ಕೋವಿಡ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರತವಾಗಿದ್ದ ಕಾನ್ಸ್ಟೇಬಲ್ ಒಬ್ಬರಿಗೆ ಸೋಂಕು ಪತ್ತೆ ಆಗಿತ್ತು. ಸೋಂಕಿತ ಸಿಬ್ಬಂದಿಯ ಕುಟುಂಬ ಸದಸ್ಯರ ಮಾದರಿ ಸಂಗ್ರಹಿಸಲಾಗಿದೆ.
ಸೋಂಕಿತ ಅಧಿಕಾರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮತ್ತೊಬ್ಬ ಕಾನ್ಸ್ಟೇಬಲ್ಗೆ ಕೊರೊನಾ ದೃಢಪಟ್ಟಿದ್ದರಿಂದ ಜಿಲ್ಲೆಯ ಜನರಲ್ಲಿ ಸಹಜವಾಗಿ ಆತಂಕ ಮನೆ ಮಾಡಿದೆ.