ETV Bharat / state

ಹರಿಹರ ಎಪಿಎಂಸಿ ಅಧ್ಯಕ್ಷರ ಚುನಾವಣೆ:  ಬಿಜೆಪಿ ಬೆಂಬಲಿತ ಅಭ್ಯರ್ಥಿ ಅವಿರೋಧ ಆಯ್ಕೆ - Latest News for harihar apmc president election

ಹರಿಹರ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಮಹಿಳಾ ಅಭ್ಯರ್ಥಿ ಶಾಂತಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

apmc-president-election-in-harihara
ಹರಿಹರ ಎಪಿಎಂಸಿ ಅಧ್ಯಕ್ಷರ ಚುನಾವಣೆ
author img

By

Published : Feb 25, 2020, 4:59 PM IST

ಹರಿಹರ : ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಮಹಿಳಾ ಅಭ್ಯರ್ಥಿ ಶಾಂತಮ್ಮ ಎನ್ನುವವರು ಅಧ್ಯಕ್ಷ ಗಾಧಿಗಾಗಿ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಒಪ್ಪಂದದಂತೆ ಈ ಹಿಂದೆ ಕಾಂಗ್ರೆಸ್ ಅಭ್ಯರ್ಥಿ ನರೇಂದ್ರ ಅವರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ತಹಶೀಲ್ದಾರರು ನೂತನ ಅಧ್ಯಕ್ಷರ ನೇಮಕಕ್ಕೆ ಚುನಾವಣೆ ನಿಗದಿಪಡಿಸಿದ್ರು.

ಹರಿಹರ ಎಪಿಎಂಸಿ ಅಧ್ಯಕ್ಷರ ಚುನಾವಣೆ

ಕಾಂಗ್ರೆಸ್ ಮತ್ತು ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿದ್ದ ಕಾರಣ, ಅವಧಿ ಮುಗಿದ ಕಾಂಗ್ರೆಸ್ ಅಭ್ಯರ್ಥಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೇ ಕಾರಣಕ್ಕಾಗಿ ಮತ್ತೆ ನಾಮಪತ್ರ ಸಲ್ಲಿಸಿರಲಿಲ್ಲ. ಇನ್ನು ಜೆಡಿಎಸ್​ನಿಂದಲೂ ಯಾರೊಬ್ಬರೂ ನಾಮಪತ್ರ ಸಲ್ಲಿಸದೇ ಇರುವುದರಿಂದ ಬಿಜೆಪಿ ಪಕ್ಷದ ಬೆಂಬಲಿತ ಅಭ್ಯರ್ಥಿ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ಅಂತಿಮವಾಗಿ ಅವರನ್ನೇ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.