ದಾವಣಗೆರೆ: ಹೊನ್ನಾಳಿ ಕ್ಷೇತ್ರದ ಶಾಸಕ ಎಂಪಿ ರೇಣುಕಾಚಾರ್ಯ ಅವರ ಆಪ್ತ ಸಹಾಯಕ(ಪಿಎ) ಪ್ರಜ್ವಲ್ರ ಮೇಲೆ ಸ್ವಪಕ್ಷ ಬಿಜೆಪಿಯವರೇ ಹಲ್ಲೆ ನಡೆಸಿದ ಆರೋಪ ಪ್ರಕರಣ ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ಸೋಮವಾರ ರಾತ್ರಿ 10.30 ರ ಸುಮಾರಿಗೆ ನಡೆದಿದೆ. ಗಾಯಗೊಂಡ ಪ್ರಜ್ವಲ್ ಅವರನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಲಾಗಿದೆ.
ಗಾಯಗೊಂಡು ಆಸ್ಪತ್ರೆಯಲ್ಲಿ ದಾಖಲಾಗಿರುವ ಪ್ರಜ್ವಲ್ರನ್ನು ಶಾಸಕ ಎಂಪಿ ರೇಣುಕಾಚಾರ್ಯ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಬಳಿಕ ಈ ಕೂಡಲೇ ಹಲ್ಲೆಕೋರರನ್ನು ಬಂಧಿಸುವಂತೆ ಹೊನ್ನಾಳಿ ಪೊಲೀಸರನ್ನು ಕೋರಿದ್ದಾರೆ. ಆಪ್ತ ಸಹಾಯಕನ ಮೇಲೆ ಸ್ವಪಕ್ಷೀಯರೇ ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗ್ತಿದೆ.
ಓದಿ: ರಸ್ತೆ ಗುಂಡಿಗೆ ಮಹಿಳೆ ಬಲಿ: ಪೊಲೀಸರಿಂದ ವರದಿ ಕೇಳಿದ ಸಿಎಂ ಬೊಮ್ಮಾಯಿ..!