ದಾವಣಗೆರೆ: ಸ್ಕ್ಯಾನಿಂಗ್ ಸೆಂಟರ್ಗಳ ಮೇಲೆ ತಹಶಿಲ್ದಾರ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ ಘಟನೆ ಜಿಲ್ಲೆಯ ಜಗಳೂರು ಪಟ್ಟಣದಲ್ಲಿ ನಡೆದಿದೆ. ದಾಳಿ ವೇಳೆ ಅಕ್ರಮ ನಡೆದಿರುವುದು ಬಯಲಾಗಿದೆ ಎಂದು ಹೇಳಲಾಗ್ತಿದೆ. ಬೇಕಾಬಿಟ್ಟಿಯಾಗಿ ಸ್ಕ್ಯಾನಿಂಗ್ ಸೆಂಟರ್ಗಳ ಮಾಲೀಕರು ಹಣ ವಸೂಲಿ ಮಾಡುತ್ತಿದ್ದಾರೆ ಆರೋಪ ಕೇಳಿಬಂದ ಹಿನ್ನೆಲೆ ಈ ದಾಳಿ ನಡೆದಿದೆ.
ಜಗಳೂರು ತಹಶಿಲ್ದಾರ್ ತಿಮ್ಮಣ್ಣ ಹಾಗೂ ತಾಲೂಕು ವೈದ್ಯಾಧಿಕಾರಿಗಳ ನೇತೃತ್ವದಲ್ಲಿ ದಾಳಿಯಾಗಿದೆ. ತಾಲೂಕು ಆಸ್ಪತ್ರೆಯಿಂದ 200 ಮೀಟರ್ ದೂರದಲ್ಲಿದ್ದ ಸ್ಕ್ಯಾನಿಂಗ್ ಸೆಂಟರ್ ಸ್ಥಳಾಂತರಕ್ಕೆ ಆದೇಶಿಸಲಾಗಿದೆ. ಎಂಟು ಸ್ಕ್ಯಾನಿಂಗ್ ಸೆಂಟರ್ಗಳಿಗೆ ತಹಶಿಲ್ದಾರ್ ನೋಟಿಸ್ ನೀಡಿದ್ದಾರೆ.