ದಾವಣಗೆರೆ: ಶಾರ್ಟ್ ಸರ್ಕ್ಯೂಟ್ನಿಂದಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ಬಾಳೆ ಸುಟ್ಟು ಹೋದ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಹನಮಂತಾಪುರ ಗ್ರಾಮದಲ್ಲಿ ನಡೆದಿದೆ.
ಹನುಮಂತಾಪುರ ಗ್ರಾಮದ ರೈತ ಲಕ್ಷ್ಮಣ್ ಎಂಬುವವರಿಗೆ ಸೇರಿದ ಮೂರು ಎಕರೆ ಬಾಳೆ ತೋಟಕ್ಕೆ ಬೆಂಕಿ ತಗುಲಿ ನಷ್ಟ ಸಂಭವಿಸಿದೆ. ಪಂಪ್ಸೆಟ್ಗೆ ಅಳವಡಿಸಿದ್ದ ತಂತಿಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಹೊತ್ತಿದೆ. ಇನ್ನೂ ಬಾಳೆ ಒಣಗಿದರಿಂದಾಗಿ ಬೆಂಕಿ ಬೇಗನೆ ಹರಡಿದ್ದು, ನೋಡ ನೋಡುತ್ತಿದ್ದಂತೆ ಬಾಳೆ ಸುಟ್ಟು ಕರಕಲಾಗಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಇನ್ನು ಕಷ್ಟಪಟ್ಟು ಬಾಳೆ ಬೆಳೆದ ರೈತ ಲಕ್ಷ್ಮಣ್ ಆತಂಕಕ್ಕೊಳಗಾಗಿದ್ದು, ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.