ದಾವಣಗೆರೆ: ಜಮೀನಿಗೆ ಹೋಗಿದ್ದ ರೈತನ ಮೇಲೆ ಕರಡಿ ದಾಳಿ ನಡೆಸಿದ್ದು, ರೈತ ಗಂಭೀರ ಗಾಯಗೊಂಡಿರುವ ಘಟನೆ ಜಗಳೂರು ತಾಲೂಕಿನ ಬಸಾಪುರ ಗ್ರಾಮದಲ್ಲಿ ನಡೆದಿದೆ.
ಚಂದ್ರನಾಯ್ಕ್ (50) ಗಾಯಾಳು ರೈತ ಎಂದು ಗುರುತಿಸಲಾಗಿದ್ದು, ಬಸಾಪುರ ಗ್ರಾಮದ ಹೊರಹೊಲಯದ ಜಮೀನಿಗೆ ರೈತ ಹೋಗಿದ್ದ. ಈ ವೇಳೆ ಅಲ್ಲಿದ್ದ ಕರಡಿ ದಾಳಿ ನಡೆಸಿದೆ ಎನ್ನಲಾಗಿದೆ.
ರೈತನ ಮುಖ ಹಾಗೂ ದೇಹದ ವಿವಿಧ ಭಾಗಗಳ ಮೇಲೆ ದಾಳಿ ನಡೆಸಿದ್ದು, ರೈತನ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಜಗಳೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಜಗಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.