ದಾವಣಗೆರೆ: ನಗರದಲ್ಲಿ 48ಕ್ಕೂ ಹೆಚ್ಚು ಅನಧಿಕೃತ ಕಸಾಯಿಖಾನೆಗಳು ಇದ್ದು, ವಾರದೊಳಗೆ ಮುಚ್ಚದಿದ್ದರೆ ಆಗಸ್ಟ್ ತಿಂಗಳಲ್ಲಿ ದಾಳಿ ಮಾಡಿ ಕಸಾಯಿಖಾನೆಗಳನ್ನು ಸುಟ್ಟು ಹಾಕುತ್ತೇವೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿಕೆ ನೀಡಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವ ಕಸಾಯಿಖಾನೆಗಳೂ ಅನುಮತಿ ಪಡೆದಿಲ್ಲ. ಮಾಹಿತಿ ಹಕ್ಕಿನಡಿಯಲ್ಲಿ ಕೇಳಿದಾಗ ಈ ವಿಷಯ ಗೊತ್ತಾಗಿದೆ. ಆದಷ್ಟು ಬೇಗ ಕಸಾಯಿಖಾನೆಗಳನ್ನು ಬಂದ್ ಮಾಡಬೇಕು. ಇಲ್ಲದಿದ್ದರೆ ಆಗಸ್ಟ್ನಲ್ಲಿ ದೊಡ್ಡ ಮಟ್ಟದ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು. ಇನ್ನು ಗೋ ಕಾರ್ಯಕರ್ತ ಶಿವು ಉಪ್ಪಾರ್ ಹತ್ಯೆ ಮಾಡಿದ ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ಹಿಂದೂಪರ ಸಂಘಟನೆ ಜೊತೆಗೂಡಿ ಶ್ರೀರಾಮಸೇನೆಯು ಬೆಳಗಾವಿ ಚಲೋ ನಡೆಸಲು ನಿರ್ಧರಿಸಿದೆ ಎಂದು ತಿಳಿಸಿದ್ರು.