ದಾವಣಗೆರೆ : ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿದ ದಾರುಣ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮಂಗೇನಹಳ್ಳಿ ಬಳಿಯ ರಾಜ್ಯ ಹೆದ್ದಾರಿ ಬಳಿ ನಡೆದಿದೆ.
ಮೇದಿಕೆರೆ ಗ್ರಾಮದ ಅಭಿಷೇಕ್(20), ತಣಿಗೆರೆ ಗ್ರಾಮದ ಕಾರ್ತಿಕ್(18) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ವೇಗವಾಗಿ ಬೈಕ್ ಚಲಾಯಿಸಿದ್ದರಿಂದ ಪರಸ್ಪರ ಬೈಕ್ಗಳು ಡಿಕ್ಕಿ ಹೊಡೆದಿವೆ. ಇದರ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನಪ್ಪಿದ್ದಾರೆ. ಇನ್ನು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಮೃತದೇಹವನ್ನು ಚನ್ನಗಿರಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಸಂತೆಬೆನ್ನೂರು ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅತಿ ವೇಗವೇ ಅಪಘಾತಕ್ಕೆ ಪ್ರಮುಖ ಕಾರಣ ಎಂದು ತಿಳಿದು ಬಂದಿದೆ.