ದಾವಣಗೆರೆ: ಬೈಕ್ ಹಾಗೂ ಕಾರ್ ನಡುವೆ ಡಿಕ್ಕಿ ಸಂಭವಿಸಿ, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ನಗರದ ಹೊಸ ಕುಂದುವಾಡ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.
ಸತ್ಯನಾರಾಯಣ ಕ್ಯಾಂಪ್ ನಿವಾಸಿ ಸತ್ಯನಾರಾಯಣಪ್ಪ(65) ಮೃತ ರ್ದುದೈವಿ. ಸತ್ಯನಾರಾಯಣ ಎಂದಿನಂತೆ ಕ್ಯಾಂಪ್ನಲ್ಲಿ ಸಾಕಿದ್ದ ಹಸುವಿನ ಹಾಲನ್ನ ಮನೆ ಬಳಕೆಗೆ ತರಲು ತೋಟಕ್ಕೆ ಹೋಗುತ್ತಿದ್ದಾಗ ಹಿಂದಿನಿಂದ ಬಂದ ಕೆಎ 03- ಎಡಿ 9579 ನಂಬರ್ನ ಈಟಿಯಸ್ ಕಾರು ಬೈಕ್ಗೆ ಡಿಕ್ಕಿ ಹೊಡೆದಿದೆ. ಕಾರು ಗುದ್ದಿದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ.
ಕಾರು ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ದಕ್ಷಿಣ ಸಂಚಾರಿ ಠಾಣೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ರೆಡ್ಡಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ..