ETV Bharat / state

ಬಿಜೆಪಿ ಸರ್ಕಾರ ರೈತ ವಿರೋಧಿ ಸರ್ಕಾರ: ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ - karnataka polls

ಮಾಜಿ ಮುಖ್ಯಮಂತ್ರಿ ಹೆಚ್​​ ಡಿ ಕುಮಾರಸ್ವಾಮಿ ಅವರಿಂದು ದಾವಣಗೆರೆ ಜಿಲ್ಲೆಯ ಮಾಯಕೊಂಡ ಕ್ಷೇತ್ರದ ಜೆಡಿಎಸ್​​ ಅಭ್ಯರ್ಥಿ ಪರ ಮತಯಾಚಿಸಿದರು.

bjp-government-is-anti-farmer-government-former-cm-kumaraswamy-lashed-out
ಬಿಜೆಪಿ ಸರ್ಕಾರ ರೈತ ವಿರೋಧಿ ಸರ್ಕಾರ: ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ
author img

By

Published : May 4, 2023, 4:41 PM IST

ಬಿಜೆಪಿ ಸರ್ಕಾರ ರೈತ ವಿರೋಧಿ ಸರ್ಕಾರ: ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ

ದಾವಣಗೆರೆ: ಬಿಜೆಪಿ ಸರ್ಕಾರ ರೈತ ವಿರೋಧಿ ಸರ್ಕಾರ ಪ್ರತಿಯೊಂದು ಬೆಲೆ ಏರಿಕೆ ಮಾಡಿದೆ. ಸಿಲಿಂಡರ್ ಬೆಲೆ ಗಗನಕ್ಕೇರಿದೆ. ನಮ್ಮ ಸರ್ಕಾರ ರಚನೆ ಆದರೆ ಪ್ರತಿ ವರ್ಷ ಐದು ಸಿಲಿಂಡರ್ ಉಚಿತವಾಗಿ ನೀಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು.

ದಾವಣಗೆರೆ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪರ ಮತಯಾಚಿಸಲು ಆಗಮಿಸಿದ್ದ ಅವರು ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿದರು. ಪಂಚರತ್ನ ಯೋಜನೆಗೆ ಎರಡೂವರೆ ಲಕ್ಷ ಕೋಟಿ ಮೀಸಲಿಡುತ್ತೇನೆ. ಈಗಾಗಲೇ 65 ವರ್ಷ ವಯಸ್ಸಾದವರಿಗೆ 5 ಸಾವಿರ ರೂ. ಘೋಷಣೆ ಮಾಡಿದ್ದೇವೆ. ಒಂದು ಬಾರಿ ಸ್ಪಷ್ಟ ಬಹುಮತದ ಸರ್ಕಾರ ಕೊಡಿ. ಮಾಯಕೊಂಡ ಜೆಡಿಎಸ್ ಅಭ್ಯರ್ಥಿ ಆನಂದಪ್ಪ ಅವರನ್ನು ಗೆಲ್ಲಿಸಿಕೊಡಿ ಎಂದು ಮತದಾರರಿಗೆ ಮನವಿ ಮಾಡಿದರು.

ಪಂಚರತ್ನ ಯೋಜನೆಗಳನ್ನು ಅನುಷ್ಠಾನಕ್ಕೆ ನಿಮ್ಮ ಆಶೀರ್ವಾದ ಬೇಕಾಗಿದೆ. ಐದು ಲಕ್ಷ ವೆಚ್ಚದಲ್ಲಿ ಪ್ರತಿಯೊಂದು ಕುಟುಂಬಕ್ಕೆ ಮನೆ ನಿರ್ಮಾಣ ಮಾಡಿಕೊಡುತ್ತೇವೆ. ಇದಕ್ಕಾಗಿ ಹಳ್ಳಿ ಹಳ್ಳಿಗಳಿಗೆ ಸಂಚರಿಸುತ್ತಿದ್ದೇನೆ. ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳ ಸಾಲಮನ್ನಾ ಆಗಬೇಕಾದರೆ ನಮಗೆ ಆಶೀರ್ವಾದ ಮಾಡಿ, 75 ವರ್ಷಗಳಿಂದ ರಾಷ್ಟ್ರೀಯ ಪಕ್ಷಗಳಿಗೆ ನಂಬಿ ಮತ ನೀಡುತ್ತಾ ಬರುತ್ತಿದ್ದೀರಿ. ಈ ಬಾರಿ ಪೂರ್ಣಬಹುಮತ ಸರ್ಕಾರ ಬರಲು ಸಹಾಯ ಮಾಡಿ ಎಂದು ಮಾಯಕೊಂಡ ಕ್ಷೇತ್ರದ ಜನರಲ್ಲಿ ಕೇಳಿಕೊಂಡರು.

ಜಾತ್ಯತೀತ ಜನತಾ ದಳ ಸರ್ಕಾರ ಅಧಿಕಾರಕ್ಕೆ ಬಂದರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅತ್ಯುತ್ತಮ ಶಾಲಾ ಕೊಠಡಿ ನಿರ್ಮಾಣ ಮಾಡುತ್ತೇವೆ. ಎಲ್​ಕೆಜಿ ಯಿಂದ 12 ತರಗತಿವರೆಗೆ ಉತ್ತಮ ಉಚಿತ ಶಿಕ್ಷಣ, ಕಾಯಿಲೆಗಳಿಗೆ ಸಂಪೂರ್ಣ ಉಚಿತ ಚಿಕಿತ್ಸೆ ನೀಡುತ್ತೇವೆ. ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ರೈತರ ಸಾಲಮನ್ನಾ ಮಾಡಿದ್ದೇನೆ, ಇನ್ನುಳಿದ ಸಾಲಮನ್ನಾವನ್ನು ಬಿಜೆಪಿ ಸರ್ಕಾರ ಮಾಡಿಲ್ಲ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿ ಸರ್ಕಾರದ ಆಡಳಿತದಲ್ಲಿ ದಿನೇ ದಿನೇ ರಸಗೊಬ್ಬರದ ಬೆಲೆ ಏರಿಕೆಯಾಗುತ್ತಲೆ ಇದೆ. ಇದಕ್ಕಾಗಿ ಬಿತ್ತೆನೆ ಬೀಜ ಮತ್ತು ರಸಗೊಬ್ಬರ ಖರೀದಿಗೆ ಪ್ರತಿ ಎಕರೆಗೆ ಸರ್ಕಾರವೇ ಹತ್ತು ಸಾವಿರ ಹಣವನ್ನು ಉಚಿತವಾಗಿ ಕೋಡುತ್ತೇವೆ. ಹಳ್ಳಿಯ ಹೆಣ್ಣುಮಕ್ಕಳು ಸ್ವಾವಲಂಬಿಯಾಗಿ ಬದಕಲು ಪಂಚರತ್ನ ಯೋಜನೆಯಡಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸುತ್ತೇವೆ ಎಂದು ಭರವಸೆ ನೀಡಿದರು.

ಇಂದು ಸಂಜೆ ರಾಜ್ಯಾದ್ಯಂತ ಸಾಮೂಹಿಕ ಹನುಮಾನ್ ಚಾಲೀಸಾ ಪಾರಾಯಣ: ಕಾಂಗ್ರೆಸ್ ಪ್ರಣಾಳಿಕೆಯಲ್ಲಿನ ಬಜರಂಗದಳ ನಿಷೇಧ ಪ್ರಸ್ತಾಪ ಖಂಡಿಸಿ ವಿಶ್ವ ಹಿಂದೂ ಪರಿಷದ್ ಮತ್ತು ಬಜರಂಗದಳ ಇಂದು ಸಂಜೆ ಸಾಮೂಹಿಕ ಹನುಮಾನ್ ಚಾಲೀಸಾ ಪಾರಾಯಣಕ್ಕೆ ಕರೆ ನೀಡಿದೆ. ಕಾಂಗ್ರೆಸ್ ಪಕ್ಷವು 2023 ರ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ನಿಷೇಧಿಸುವ ಅಂಶವನ್ನು ಪ್ರಕಟಿಸಿರುವುದು ಎಲ್ಲಾ ಹಿಂದೂ ಸಂಘಟನೆಗಳಿಗೆ ಹಾಗೂ ಹಿಂದು ಸಮಾಜಕ್ಕೆ ಆತಂಕಕಾರಿಯಾಗಿದೆ. ಈ ಸಂದರ್ಭದಲ್ಲಿ ನಮ್ಮ ರಾಜ್ಯಾದ್ಯಂತ ಸಜ್ಜನ ಶಕ್ತಿಯ ಜಾಗೃತಿಗಾಗಿ, ಧರ್ಮ ಸಂಸ್ಕೃತಿಗಳ ರಕ್ಷಣೆಗಾಗಿ ಮತ್ತು ಹಿಂದುತ್ವದ ವಿಜಯಕ್ಕಾಗಿ ಸಂಕಲ್ಪವನ್ನು ಮಾಡಿ ಎಲ್ಲರೂ ಇಂದು ಸಂಜೆ 7.00 ಗಂಟೆಗೆ ರಾಜ್ಯಾದ್ಯಂತ ಹನುಮಾನ್ ಚಾಲೀಸಾ ಪಾರಾಯಣ ಕಾರ್ಯಕ್ರಮವನ್ನು ನಡೆಸುವಂತೆ ವಿಶ್ವ ಹಿಂದೂ ಪರಿಷದ್​ ಸಮಸ್ತ ಕಾರ್ಯಕರ್ತರಿಗೆ ಹಾಗೂ ಹಿಂದೂ ಸಂಘಟನೆಗಳಿಗೆ ಕರೆ ನೀಡಿದೆ.

ಇದನ್ನೂ ಓದಿ: ಬಿಜೆಪಿಯಿಂದ ನಮ್ಮ ಪ್ರಣಾಳಿಕೆ ನಕಲು: ಹೆಚ್.ಡಿ.ಕುಮಾರಸ್ವಾಮಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.