ETV Bharat / state

ರಾಜ್ಯದಲ್ಲಿ ಮತ್ತೆ ಬಿಜೆಪಿ ಹೆಚ್ಚು ಸೀಟುಗಳೊಂದಿಗೆ ಅಧಿಕಾರಕ್ಕೆ ಬರುತ್ತದೆ : ಸಚಿವ ಎಂಟಿಬಿ ನಾಗರಾಜ್ - ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್

ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬಂದವರಿಗೆಲ್ಲ ಟಿಕೇಟ್ ಸಿಕ್ಕೇ ಸಿಗುತ್ತೆ ಅನ್ನೋ ವಿಶ್ವಾಸ ಇದೆ. ಯಾವುದೇ ಕಾರಣಕ್ಕೂ ನಾವ್ಯಾರು ಕಾಂಗ್ರೆಸ್​ಗೆ ಹೋಗುವ ಪ್ರಶ್ನೆ ಇಲ್ಲ ಎಂದು ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಟಿಕೆಟ್ ಪಡೆಯುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು.

ಸಚಿವ ಎಂಟಿಬಿ ನಾಗರಾಜ್
ಸಚಿವ ಎಂಟಿಬಿ ನಾಗರಾಜ್
author img

By

Published : Dec 11, 2022, 8:39 PM IST

ಸಚಿವ ಎಂಟಿಬಿ ನಾಗರಾಜ್ ಅವರು ಮಾತನಾಡಿದರು

ದಾವಣಗೆರೆ: ರಾಜ್ಯದಲ್ಲಿ ಮತ್ತೆ ಬಿಜೆಪಿ ಹೆಚ್ಚು ಸೀಟುಗಳೊಂದಿಗೆ ಅಧಿಕಾರಕ್ಕೆ ಬರುತ್ತದೆ. ಕಾಂಗ್ರೆಸ್​ನಿಂದ ಇನ್ನೂ ಹಲವರು ಬಿಜೆಪಿಗೆ ಬರಲಿದ್ದಾರೆ ಎಂದು ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಅವರು ತಿಳಿಸಿದ್ದಾರೆ.

ಜಿಲ್ಲೆಯ ಹೊನ್ನಾಳಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬಂದವರಿಗೆಲ್ಲ ಟಿಕೆಟ್ ಸಿಕ್ಕೇ ಸಿಗುತ್ತೆ ಅನ್ನೋ ವಿಶ್ವಾಸ ಇದೆ. ಯಾವುದೇ ಕಾರಣಕ್ಕೂ ನಾವ್ಯಾರು ಕಾಂಗ್ರೆಸ್​ಗೆ ಹೋಗುವ ಪ್ರಶ್ನೆ ಇಲ್ಲ ಎಂದು ಟಿಕೆಟ್ ಪಡೆಯುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು.

ಇನ್ನು, ಬಿಜೆಪಿ ಹಿರಿಯ ನಾಯಕರಿಗೆ ಟಿಕೆಟ್ ನೀಡದಿರಲು ನಿರ್ಧಾರದ ಕುರಿತು ಪ್ರತಿಕ್ರಿಯಿಸಿದ ಸಚಿವ ಎಂಟಿಬಿ, ಕೆಲ ಸೀನಿಯರ್​ಗಳಿಗೆ ಬಿಜೆಪಿ ಟಿಕೆಟ್ ಸಿಗುವುದಿಲ್ಲ ಎಂಬುದು ಹೈಕಮಾಂಡ್ ತೀರ್ಮಾನ. ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತೋ ಅದಕ್ಕೆ ನಾವು ಬದ್ಧ ಎಂದರು.

ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಸ್ವಾಗತ ಮಾಡಿದ್ರು ಸಹ ನಾವು ಕಾಂಗ್ರೆಸ್ಸಿಗೆ ಮಾತ್ರ ಹೋಗಲ್ಲ..

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನಮಗೆ ಸ್ವಾಗತ ಮಾಡಿದ್ರು ಸಹ ನಾವು ಕಾಂಗ್ರೆಸ್ಸಿಗೆ ಮಾತ್ರ ಹೋಗಲ್ಲ.‌ ಮತ್ತೆ ನಾವು ಬಿಜೆಪಿಯಿಂದಲೇ ಸ್ಪರ್ಧೆ ಮಾಡುತ್ತೇವೆ.‌ 125 ಸೀಟು ಗೆದ್ದು ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಚುನಾವಣೆ ಮುನ್ನವೇ ಭವಿಷ್ಯ ನುಡಿದರು. ಚುನಾವಣೆಯನ್ನು ಹೇಗೆ ಎದುರಿಸಬೇಕು, ಯಾರಿಗೆ ಯಾವ ಉಸ್ತುವಾರಿಯಾಗಿ ಕೊಡಬೇಕು ಎಂಬುದರ ಬಗ್ಗೆ ಪಕ್ಷದ ವರಿಷ್ಠರು‌ ನಿರ್ಧಾರ ಮಾಡುತ್ತಾರೆ ಎಂದು ಹೇಳಿದರು.

ಓದಿ: ಯಾವುದೇ ಪ್ರಾದೇಶಿಕ ಪಕ್ಷ ಸೇರುವುದಿಲ್ಲ : ಎಂಟಿಬಿ ನಾಗರಾಜ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.