ದಾವಣಗೆರೆ: ಕೌಟುಂಬಿಕ ಕಲಹದ ಕಾರಣ ತಾಯಿ ಮತ್ತು ಸಹೋದರಿಯ ಮೇಲೆ ಯುವಕನೋರ್ವ ಟ್ರ್ಯಾಕ್ಟರ್ ಹತ್ತಿಸಿ ಕೊಲೆ ಮಾಡಿದ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಯಕ್ಕೆಗುಂಡಿ ಗ್ರಾಮದಲ್ಲಿ ನಡೆದಿದೆ.
ಸರೋಜಮ್ಮ (63) ಮತ್ತು ಜ್ಯೋತಿ (42) ಕೊಲೆಯಾದ ತಾಯಿ ಹಾಗೂ ಸಹೋದರಿ. ಆರೋಪಿ ಘಟನೆ ಬಳಿಕ ಭರಮಗೌಡ ಪರಾರಿಯಾಗಿದ್ದಾನೆ.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಇಬ್ಬರ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಕಬ್ಬಿಣ ರಾಡ್ ನಿಂದ ಹೊಡೆದು ಕೊಲೆ ಮಾಡಿದ್ದಾನೆ. ಹಲ್ಲೆಯಲ್ಲಿ ತೀವ್ರವಾಗಿ ಗಾಯಗೊಂಡ ಇಬ್ಬರೂ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಮಲೇಬೆನ್ನೂರು ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.